ದೆಹಲಿ-ಎನ್ ಸಿಆರ್ ನಲ್ಲಿ ಮಂಗಳವಾರ ಮಧ್ಯಾಹ್ನ 2:25 ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸೋಮವಾರ ಸಂಜೆ ಮೇಘಾಲಯದ ಉತ್ತರ ಗಾರೋ ಹಿಲ್ಸ್ ಜಿಲ್ಲೆಯಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಸಂಜೆ 6.15ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ಭೂಕಂಪದ ಆಳ 10 ಕಿ.ಮೀ. ಇತ್ತು.
ದೆಹಲಿ-ಎನ್ ಸಿಆರ್ ನಲ್ಲಿ ಅನೇಕ ನೆಟ್ಟಿಗರು ಕಂಪನದ ಅನುಭವದ ಬಗ್ಗೆ ಪೋಸ್ಟ್ ಮಾಡಿದ್ದಾರೆ.