ಮನೆ ರಾಜ್ಯ ತೆರಿಗೆ ವಂಚನೆ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ದಾಳಿ

ತೆರಿಗೆ ವಂಚನೆ: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಐಟಿ ದಾಳಿ

0

ಬೆಂಗಳೂರು: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ರಾತ್ರೋರಾತ್ರಿ ಚೆನ್ನೈ, ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ವಿಜಯನಗರ, ಬಿಟಿಎಂ ಲೇಔಟ್ , ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ತೆರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ‌ ಮನೆ ಮೇಲೆ ದಾಳಿ‌ಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸದ್ಯ ಮನೆ ಹಾಗೂ ಕಚೇರಿಗಳ‌‌ಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ವಿಜಯನಗರದಲ್ಲಿ ವೈದ್ಯೆ ನಿವಾಸದ ಮೇಲೆ ಸಹ ಐಟಿ ದಾಳಿಯಾಗಿದೆ. ಪ್ರಶಾಂತನಗರದ ವೈದ್ಯೆ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಮೇಕ್ರಿಸರ್ಕಲ್ ಬಳಿಯ ಗಜರಾಜ ಜುವೆಲರ್ಸ್ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ಅಂಗಡಿ ಬಾಗಿಲು ಮುಚ್ಚಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಂಗಳೂರಿನ ಶಾಂತಿನಗರದ ಉದ್ಯಮಿ ನವೀನ್​ ಮನೆ ಮೇಲೂ ಐಟಿ ದಾಳಿಯಾಗಿದೆ. ಎರಡು ಇನೋವಾ ಕಾರಿನಲ್ಲಿ ಬಂದಿರುವ ಎಂಟು ಮಂದಿ ಐಟಿ ಅಧಿಕಾರಿಗಳು, ನವೀನ್ ಅವರ ಶಾಂತಿನಗರದಲ್ಲಿನ ದೊಡ್ಡ ಐಶಾರಾಮಿ ಬಂಗಲೆಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.