ಮನೆ ರಾಜ್ಯ ಅರಣ್ಯ ಒತ್ತುವರಿ ತೆರವಿಗೆ ಕ್ರಮ ವಹಿಸಲು ಈಶ್ವರ ಖಂಡ್ರೆ ಸೂಚನೆ

ಅರಣ್ಯ ಒತ್ತುವರಿ ತೆರವಿಗೆ ಕ್ರಮ ವಹಿಸಲು ಈಶ್ವರ ಖಂಡ್ರೆ ಸೂಚನೆ

0

ಬೆಂಗಳೂರು: ರಾಜ್ಯದಲ್ಲಿ ಲಕ್ಷ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಅರಣ್ಯ ಭೂಮಿ ಮತ್ತು ಅರಣ್ಯ ಸಂಪತ್ತು ಕಾಪಾಡಲು ಎಲ್ಲ ಸಾಧ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ನೂತನ ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.


ಕಳೆದ 30ರಂದು ನಿವೃತ್ತರಾದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯಪಡೆ ಮುಖ್ಯಸ್ಥ ರಾಜೀವ್ ರಂಜನ್ ಅವರ ಸ್ಥಾನದಲ್ಲಿ ಅಧಿಕಾರ ವಹಿಸಿಕೊಂಡ ತರುವಾಯ ಇಂದು ದೀಕ್ಷಿತ್ ಅವರು ಸಚಿವರನ್ನು ಭೇಟಿ ಮಾಡಿ ಸಮಾಲೋಚಿಸಿದರು.
ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಾಗಿದ್ದು, ವನ್ಯಜೀವಿಗಳು ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದು ಜೀವಹಾನಿ, ಬೆಳೆಹಾನಿ ಮಾಡುವುದನ್ನು ತಡೆಯಲು ಅರಣ್ಯದೊಳಗೆ ಮೇವು ಮತ್ತು ನೀರು ಲಭ್ಯವಾಗುವಂತೆ ಕ್ರಮ ವಹಿಸುವಂತೆ ಎಲ್ಲ ವಲಯಗಳಿಗೆ ಸೂಚಿಸುವಂತೆ ಸಚಿವರು ತಿಳಿಸಿದರು.
ನೂತನವಾಗಿ ಅರಣ್ಯ ಪಡೆ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರಿಗೆ ಸಚಿವರು ಶುಭಕೋರಿದರು.