ಮೈಸೂರು: ಮೈಸೂರು ದಸರಾ 2023 ರಲ್ಲಿ ವಿವಿಧ ಕಂಪನಿಗಳು, ಉದ್ಯಮಿಗಳು ಪ್ರಾಯೋಜಕತ್ವ ವಹಿಸಿ ಸ್ಪಾನ್ಸರ್ ನೀಡಲು ಅವಕಾಶವಿದ್ದು, ನಮ್ಮೊಂದಿಗೆ ಕೈಜೋಡಿಸಿ ದಸರಾ ಆಚರಣೆ ಯಶಸ್ವಿಗೊಳಿಸುವುದರೊಂದಿಗೆ ತಮ್ಮ ವ್ಯಾಪಾರ ವಹಿವಾಟು ಅಭಿವೃದ್ಧಿ ಗೊಳಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ನಗರದ ಲಲಿತ ಮಹಲ್ ಪ್ಯಾಲೇಸ್ ನಲ್ಲಿ ಹಮ್ಮಿಕೊಂಡಿದ್ದ ದಸರಾ ಪ್ರಾಯೋಜಕತ್ವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಸರಳವೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ. ವಿವಿಧ ರೀತಿಯ ಪ್ರಾಯೋಜಕತ್ವಗಳು ಇದ್ದು, ಟೈಟಲ್ ಸ್ಪಾನ್ಸರ್ 3 ಕೋಟಿ, ಪ್ಲಾಟಿನಂ ಸ್ಪಾನ್ಸರ್ 1 ಕೋಟಿ, ಗೋಲ್ಡ್ ಸ್ಪಾನ್ಸರ್ 50 ಲಕ್ಷ , ಸಿಲ್ವರ್ ಸ್ಪಾನ್ಸರ್ 25 ಲಕ್ಷ, ಅಸೋಸಿಯೇಟ್ ಮತ್ತು ಇವೆಂಟ್ ಸ್ಪಾನ್ಸರ್ 3 ಲಕ್ಷ ಇರುತ್ತದೆ. ಸ್ಪಾನ್ಸರ್ ಮಾಡುವವರಿಗೆ ದಸರಾ ಕಾರ್ಯಕ್ರಮಗಳಲ್ಲಿ ತಮ್ಮ ಕಂಪನಿಯ ಜಾಹೀರಾತುಗಳನ್ನು ಪ್ರದರ್ಶನ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ತಾವು ಪೂರ್ಣ ಒಂದು ಈವೆಂಟ್ ಅಥವಾ ಒಂದು ದಿನ,ಒಂದು ಕಾರ್ಯಕ್ರಮ ಯಾವ ರೀತಿಯಾದರೂ ಪ್ರಾಯೋಜಕತ್ವ ನೀಡಬಹುದಾಗಿದೆ, ದಸರಾ ಹೋರ್ಡಿಂಗ್ಸ್,ಬ್ಯಾನರ್ಸ್ ಮತ್ತು ಕಾರ್ಯಕ್ರಮ ನಿರೂಪಕರಿಂದ ನಿಮ್ಮ ಉತ್ಪನ್ನಗಳ ಹೆಸರುಗಳನ್ನು ಹೇಳಿಸುವ ಮೂಲಕ ಬ್ರಾಂಡ್ ಮಾಡಬಹುದಾಗಿದೆ ಇದರಿಂದ ನೀವು ಬೆಳೆಯುವುದರೊಂದಿಗೆ ನಿಮ್ಮ ಉದ್ಯಮಗಳ ಬೆಳವಣಿಗೆ ಆಗಲಿದೆ ಎಂದರು.
ದಸರಾ ಆಚರಣೆಗೆ ವಿವಿಧ ಸಮಿತಿಗಳನ್ನು ಮಾಡಿ ಅಧಿಕಾರಿಗಳನ್ನು ನೇಮಿಸಲಾಗಿದೆ. ಸ್ಪಾನ್ಸರ್ ಶಿಪ್ ನೀಡುವವರು ನಾಳೆ ಬೆಳಿಗ್ಗೆ 12 ಗಂಟೆಯೊಳಗೆ ಮಾಹಿತಿ ನೀಡಬೇಕು. ರೈತ ದಸರಾಗೆ ರಸಗೊಬ್ಬರ ಕಂಪನಿಗಳು, ಟ್ರಾಕ್ಟರ್ ಹಾಗೂ ಕೃಷಿ ಉಪಕರಣಗಳ ಕಂಪನಿ ಅವರು ಪ್ರಾಯೋಜಕತ್ವ ವಹಿಸಿಕೊಳ್ಳಬಹುದಾಗಿದೆ. ಇದೇ ರೀತಿ ಉಳಿದ ಉದ್ಯಮಿಗಳು ತಮಗೆ ಅನುಕೂಲವಾಗುವ ಕಾರ್ಯಕ್ರಮ ಗಳಿಗೆ ಪ್ರಾಯೋಜಕತ್ವ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಮೂಡಾ ಆಯುಕ್ತರಾದ ದಿನೇಶ್, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ರೂಪಶ್ರೀ, ಆಹಾರ ಇಲಾಖೆಯ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಸೇರಿದಂತೆ ವಿವಿಧ ಕಂಪನಿಗಳು,ಬ್ಯಾಂಕಿಂಗ್, ಹೋಟೆಲ್ ಉದ್ಯಮಿಗಳು ಉಪಸ್ತಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.