ಮನೆ ರಾಜ್ಯ ಏಕದಿನ ವಿಶ್ವಕಪ್ 2023: ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ

ಏಕದಿನ ವಿಶ್ವಕಪ್ 2023: ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್ ಗೆ ಭರ್ಜರಿ ಜಯ

0

ಅಹಮದಾಬಾದ್ ನಲ್ಲಿ ನಡೆದ ಐಸಿಸಿ ವಿಶ್ವಕಪ್ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ನ್ಯೂಜಿಲ್ಯಾಂಡ್ ಭರ್ಜರಿ ಜಯ ಸಾಗಳಿಸಿದೆ.

ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್, ರಚಿನ್ ರವಿಂದ್ರ ಮತ್ತು ಡಿವೋನ್ ಕಾನ್ವೆ ತಲಾ ಶತಕದಾಟದ ನೆರವಿನಿಂದ ಸುಲಭ ಗೆಲುವು ಸಾಧಿಸಿದೆ.

ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಜೋ ರೂಟ್ (77) ಅವರ ಅರ್ಧಶತಕದ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 282 ರನ್ ಕಲೆಹಾಕಿತು. 283 ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್  ಪರ ಡೆವೊನ್ ಕಾನ್ವೆ (152) ಹಾಗೂ ರಚಿನ್ ರವೀಂದ್ರ (123) ಅಜೇಯ ಶತಕ ಸಿಡಿಸಿ ಮಿಂಚಿದರು. ಅಷ್ಟೇ ಅಲ್ಲದೆ 36.2 ಓವರ್ ಗಳಲ್ಲಿ ತಂಡವನ್ನು ಗುರಿ ಮುಟ್ಟಿಸುವ ಮೂಲಕ ನ್ಯೂಝಿಲೆಂಡ್ ತಂಡಕ್ಕೆ 9 ವಿಕೆಟ್ ಗಳ ಜಯ ತಂದುಕೊಟ್ಟರು.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.