ಮನೆ ರಾಜಕೀಯ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ: ಡಾ.ಕೆ.ಸುಧಾಕರ್

ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ: ಡಾ.ಕೆ.ಸುಧಾಕರ್

0

ಚಿಕ್ಕಬಳ್ಳಾಪುರ: ಜಿಲ್ಲೆಗೆ ಹಿಂದಿನ ಸರ್ಕಾರ ಮಂಜೂರು ಮಾಡಿದ್ದ ಪ್ರತ್ಯೇಕ ಹಾಲು ಒಕ್ಕೂಟ ರಚನೆಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ಜಿಲ್ಲೆಯ ರೈತರಿಗೆ ದ್ರೋಹ ಬಗೆದಿದ್ದು, ಬುಧವಾರ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಂದು ಸುಳ್ಳಿನ ಸರ್ಕಾರ, ಭ್ರಷ್ಟ ಸರ್ಕಾರ ಟೀಕಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರಿಗೆ, ಕ್ಷೇತ್ರದ ಶಾಸಕರಿಗೆ ಸ್ವಾಭಿಮಾನ ಇದೆಯೇ? ನಾನು ಜಿಲ್ಲೆಗೆ ಮೆಡಿಕಲ್ ಕಾಲೇಜ್ ಬೇಕೆಂದು ಹಠ ಹಿಡಿದು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟೆ. ಆದರೆ ಇವರು ಜಿಲ್ಲೆಗೆ ಇಷ್ಟೆಲ್ಲಾ ಆನ್ಯಾಯ ಆಗುತ್ತಿದ್ದರೂ ಕುರ್ಚಿಗೆ ಅಂಟಿಕೊಂಡು ಕೂತಿದ್ದಾರೆಂದು ಪಕ್ಷರೋವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಕಾರಿದರು.

ಅಭಿವೃದ್ದಿಗೆ ನನ್ನ ಸ್ವಾಗತ ಇದೆ. ಹೂ ಮಾರುಕಟ್ಟೆಗೆ ನಾನು ಗುರುತಿಸಿದ್ದ ಜಾಗವನ್ನು ರದ್ದು ಮಾಡಿದ್ದಾರೆ. ಆದರೆ ಇವರು 20 ಎಕರೆ ಜಾಗ ಬೇಕೆಂದು ಹೇಳಿದ್ದಾರೆ. 20 ಅಲ್ಲ 200 ಎಕೆರೆ ಜಾಗ ಗುರುತಿಸಲಿ. 100 ಕೋಟಿ ಬದಲು 200 ಕೋಟಿ ಅನುದಾನ ತರಲಿ ಅದಕ್ಕೆ ನನ್ನ ಸ್ವಾಗತ ಇದೆ ಎಂದರು.

ರಾಜ್ಯ ಸರ್ಕಾರ ರೈತರಿಗೆ ಕನಿಷ್ಠ 7 ಗಂಟೆ ವಿದ್ಯುತ್ ಕೊಡಬೇಕು, ಬರ ಇದೆ ಅಂತ ವಿದ್ಯುತ್ ಕೊರತೆ ಇದ್ದರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡಿ ರಾಜ್ಯದ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಿಯೆಂದು ಡಾ.ಕೆ.ಸುಧಾಕರ್ ಆಗ್ರಹಿಸಿದರು.