ಮನೆ ಕ್ರೀಡೆ ಏಕದಿನ ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ

ಏಕದಿನ ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ

0

ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 50 ಓವರ್ ಗಳಲ್ಲಿ ನ್ಯೂಝಿಲೆಂಡ್ ತಂಡವು 7 ವಿಕೆಟ್ ನಷ್ಟಕ್ಕೆ 322 ರನ್ ಕಲೆಹಾಕಿತು.

323 ರನ್ ಗಳ ಕಠಿಣ ಗುರಿ ಪಡೆದ ನೆದರ್ಲೆಂಡ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ 67 ರನ್ ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಮೂವರು ಪೆವಿಲಿಯನ್ ಹಾದಿ ಹಿಡಿದಿದ್ದರು. ಇದಾಗ್ಯೂ ಕಾಲಿನ್ ಅಕರ್ ಮನ್ 69 ರನ್ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾಗಿ ನಿಂತರು. ಆದರೆ ಮಿಚೆಲ್ ಸ್ಯಾಂಟ್ನರ್ 10 ಓವರ್ ಬೌಲಿಂಗ್ ಮಾಡಿ 59 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಮಿಚೆಲ್ ಸ್ಯಾಂಟ್ನರ್ ಸ್ಪಿನ್ ಮೋಡಿ ಮುಂದೆ ನೆದರ್ಲೆಂಡ್ಸ್ ಉಳಿದ ಬ್ಯಾಟರ್ ಗಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ನೆದರ್ಲೆಂಡ್ಸ್ ತಂಡವು 46.3 ಓವರ್ ಗಳಲ್ಲಿ 223 ರನ್ ಗಳಿಗೆ ಆಲೌಟ್ ಆಗುವ ಮೂಲಕ 99 ರನ್ ಗಳಿಂದ ಸೋಲೊಪ್ಪಿಕೊಂಡಿತು.

ನೆದರ್ಲೆಂಡ್ಸ್ ತಂಡ : ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.

ನ್ಯೂಝಿಲೆಂಡ್ ತಂಡ : ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.