ಮನೆ ರಾಷ್ಟ್ರೀಯ ಬೇಸಿಗೆ ರಜೆಯ ನಂತರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370 ನೇ ವಿಧಿಯ ರದ್ದು ವಿಚಾರಣೆ: ಸುಪ್ರೀಂ ಕೋರ್ಟ್‌

ಬೇಸಿಗೆ ರಜೆಯ ನಂತರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370 ನೇ ವಿಧಿಯ ರದ್ದು ವಿಚಾರಣೆ: ಸುಪ್ರೀಂ ಕೋರ್ಟ್‌

0

ನವದೆಹಲಿ (NewDelhi)-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ಸುಪ್ರೀಂ ಕೋರ್ಟ್‌ (Supreme Court) ವಿಚಾರಣೆ ನಡೆಸಲಿದೆ.

ಬೇಸಿಗೆ ರಜೆಯ ನಂತರ ಅರ್ಜಿಗಳನ್ನು ಆಲಿಸಲು ಐವರು ನ್ಯಾಯಾಧೀಶರ ಪೀಠವನ್ನು ಮರು ರಚನೆ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ.  

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸವಲತ್ತನ್ನು ಹಿಂತೆಗೆದುಕೊಂಡ ನಿರ್ಧಾರ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನಾಫಡೆ ಹೇಳಿದ್ದನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಗಮನಿಸಿತು.

ಇದು ಆರ್ಟಿಕಲ್ 370ರ ವಿಷಯವಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದ್ದಾಗಿದೆ ಎಂದು ಹಿರಿಯ ವಕೀಲರು ತಿಳಿಸಿದರು.

ಅದಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನೋಡೋಣ ಎಂದರು. ಇದನ್ನು ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ಮಾಡಬೇಕಾಗಿದ್ದು ನ್ಯಾಯಪೀಠವನ್ನು ಪುನರ್ರಚನೆ ಮಾಡಬೇಕಾಗಿದೆ ಎಂದರು.

ಜಮ್ಮು- ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಆರ್ಟಿಕಲ್ 370 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಸಂವಿಧಾನ ಪೀಠಕ್ಕೆ 2019 ರಲ್ಲಿ ಉಲ್ಲೇಖಿಸಲಾಗಿತ್ತು.

Supreme court to hear pleas against abrogation of article 370 after summer vacation