ಮನೆ ಉದ್ಯೋಗ ಭಾರತೀಯ ಅಂಚೆ ಇಲಾಖೆಯಿಂದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಿಂದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

ವಿದ್ಯಾರ್ಹತೆ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಡ್ರೈವಿಂಗ್ ಲೈಸೆನ್ಸ್​

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 04/10/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 30, 2023

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

O/o ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, C-121, ನರೈನಾ ಇಂಡಸ್ಟ್ರಿಯಲ್ ಏರಿಯಾ ಹಂತ-I, ನರೈನಾ, ನವದೆಹಲಿ-110028