ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 10 ಆಯುಷ್ ಸೇವಾ ಪ್ರತಿನಿಧಿ ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು KAPLನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಕ್ಟೋಬರ್ 20, 2023ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಹುದ್ದೆಯ ಮಾಹಿತಿ:
ಬಿಹಾರ- 2
ಕರ್ನಾಟಕ- 1
ಮಧ್ಯ ಪ್ರದೇಶ- 1
ಮಹಾರಾಷ್ಟ್ರ- 4
ತಮಿಳುನಾಡು- 1
ಉತ್ತರ ಪ್ರದೇಶ- 1
ವಿದ್ಯಾರ್ಹತೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಪ್ಯಾಕೇಜ್ 4,20,000 ಇರುತ್ತದೆ.
ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರ, ಕರ್ನಾಟಕ, ತಮಿಳುನಾಡು, ಉತ್ತರ ಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 20, 2023
KAPL ಹೌಸ್, ಪ್ಲಾಟ್ ನಂ 37, ARKA ದಿ ಬಿಸಿನೆಸ್ ಸೆಂಟರ್, 2 ನೇ ಹಂತ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬೆಂಗಳೂರು – 560058