ಮನೆ ರಾಷ್ಟ್ರೀಯ ಇಸ್ರೇಲ್ ​ನಿಂದ 212 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದ ವಾಯುಪಡೆ

ಇಸ್ರೇಲ್ ​ನಿಂದ 212 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದ ವಾಯುಪಡೆ

0

ಇಸ್ರೇಲ್ ಹಾಗೂ ಹಮಾಸ್ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ. ಇದರ ನಡುವೆ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ​ನಿಂದ ದೆಹಲಿಗೆ ಬಂದಿಳಿದಿದೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಸ್ರೇಲ್‌ನಿಂದ ಆಗಮಿಸಿದ ಭಾರತೀಯರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಆಪರೇಷನ್ ಅಜಯ್ ಅಡಿಯಲ್ಲಿ, ಇಸ್ರೇಲ್‌ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ವಿಮಾನವು ಗುರುವಾರ ಸಂಜೆ ಟೆಲ್ ಅವಿವ್‌ ನ ಬೆನ್ ಗುರಿಯನ್ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು 211 ವಯಸ್ಕರು ಮತ್ತು ಒಂದು ಶಿಶುವನ್ನು ಹೊತ್ತೊಯ್ಯಿತು.

ನಾವು ಅಲ್ಲಿ ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ಇದೇ ಮೊದಲು, ನಮ್ಮನ್ನು ಮರಳಿ ಕರೆತಂದಿದ್ದಕ್ಕೆ ಭಾರತ ಸರ್ಕಾರಕ್ಕೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞರಾಗಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ನಿಂದ ಹಿಂದಿರುಗಲು ಬಯಸುವ ನಮ್ಮ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ #OperationAjay ಅನ್ನು ಪ್ರಾರಂಭಿಸಲಾಗುತ್ತಿದೆ. ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇತರ ವ್ಯವಸ್ಥೆಗಳನ್ನು ಇರಿಸಲಾಗುತ್ತಿದೆ ಎಂದು ಜೈಶಂಕರ್ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದರು. ಬೆನ್ ಗುರಿಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇಸ್ರೇಲ್ ನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಇದು ಲಾಡ್ ನಗರದ ಉತ್ತರ ಹೊರವಲಯದಲ್ಲಿದೆ.