ಮೈಸೂರು(Mysuru)-ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ (M.Lakshman) ಗೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ (C.T.Ravi) ಅವರು ಲೀಗಲ್ ನೋಟಿಸ್ (legal notice) ನೀಡಿದ್ದಾರೆ.
ಬೇನಾಮಿ ಹೆಸರಿನಲ್ಲಿ ಸುಮಾರು 400-500 ಎಕರೆ ಆಸ್ತಿ ಮಾಡಿದ್ದು, ಇವರು ಲೂಟಿ ರವಿ ಎಂದು ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
ತಮ್ಮ ವಕೀಲರ ಮೂಲಕ ಈ ನೋಟಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ 48 ಗಂಟೆಯೊಳಗೆ ಕ್ಷಮೆ ಕೇಳಿ ನನ್ನ ಮೇಲೆ ಹೊರಿಸಲಾಗಿರುವ ಆರೋಪಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮಾನನಷ್ಟ ಮೊಕದ್ದಮ್ಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನನ್ನ ಮೇಲೆ ಏ.20 ರಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಕಳೆದ ಹತ್ತು ವರ್ಷಗಳ ಹಿಂದೆ ಸಿ.ಟಿ.ರವಿ ಅವರ ಆಸ್ತಿ 19ಎಕರೆ 3 ಇತ್ತು ಈಗ ಬೆಂಗಳೂರು, ಚಿಕ್ಕಮಗಳೂರು, ಹಾಸನ, ದೆಹಲಿ ಸೇರಿದಂತೆ ಇತರೆಡೆ 400-500ಎಕರೆ ಆಸ್ತಿ ಸಂಪಾದನೆ ಮಾಡಿದ್ದೀರಿ. ಜೊತೆಗೆ ಇವರ ಭಾವ ಸುದರ್ಶನ್ ಅವರಿಗೆ ಚಿಕ್ಕಮಗಳೂರಿನ ಎಲ್ಲಾ ಗುತ್ತಿಗೆಯನ್ನು ನೀಡಲಾಗಿದೆ. ಮೆಡಿಕಲ್ ಕಾಲೇಜಿನ 360 ಕೋಟಿ ಗುತ್ತಿಗೆಯನ್ನು ನೀಡಲಾಗಿದೆ ಎಂದು ಹೇಳುವ ಮೂಲಕ ಹಲವಾರು ಸುಳ್ಳು ಆರೋಪಗಳನ್ನು ಮಾಡಿದ್ದೀರಿ. ಇದನ್ನು ಸಾಬೀತು ಪಡಿಸಬೇಕು ಇಲ್ಲದಿದ್ದರೆ ನಿಮ್ಮ ಮೇಲೆ ಮಾನನಷ್ಟ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ.