ಭಾರತೀಯ ನೌಕಾದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಶಾರ್ಟ್ ಸರ್ವೀಸ್ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ ಸೈಟ್ www.indiannavy.nic.in ಗೆ ಭೇಟಿ ನೀಡಬಹುದು.
ಹುದ್ದೆಯ ಮಾಹಿತಿ:
ಜನರಲ್ ಸರ್ವೀಸ್ {GS(X)/Hydro Cadre} – 40
ಏರ್ ಟ್ರಾಫಿಕ್ ಕಂಟ್ರೋಲರ್ (ATC)- 66
ನೇವಲ್ ಏರ್ ಆಪರೇಶನ್ಸ್ ಆಫೀಸರ್ (ಹಿಂದಿನ ವೀಕ್ಷಕ)- 66
ಪೈಲಟ್- 66
ಲಾಜಿಸ್ಟಿಕ್ಸ್- 66
ಎಜುಕೇಶನ್- 18
ಎಂಜಿನಿಯರ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- 30
ಎಲೆಕ್ಟ್ರಿಕಲ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- 50
ನೇವಲ್ ಕನ್ಸ್ಟ್ರಕ್ಟರ್- 20
ವಿದ್ಯಾರ್ಹತೆ:
ಜನರಲ್ ಸರ್ವೀಸ್ {GS(X)/Hydro Cadre} – ಬಿಇ/ಬಿ.ಟೆಕ್
ಏರ್ ಟ್ರಾಫಿಕ್ ಕಂಟ್ರೋಲರ್ (ATC)- ಬಿಇ/ಬಿ.ಟೆಕ್
ನೇವಲ್ ಏರ್ ಆಪರೇಶನ್ಸ್ ಆಫೀಸರ್ (ಹಿಂದಿನ ವೀಕ್ಷಕ)- ಬಿಇ/ಬಿ.ಟೆಕ್
ಪೈಲಟ್- ಬಿಇ/ ಬಿ.ಟೆಕ್
ಲಾಜಿಸ್ಟಿಕ್ಸ್- ಬಿ.ಕಾಂ, ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ
ಎಜುಕೇಶನ್- ಬಿಇ/ಬಿ.ಟೆಕ್, ಎಂ.ಟೆಕ್, ಎಂ.ಎಸ್ಸಿ
ಎಂಜಿನಿಯರ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- ಬಿಇ/ಬಿ.ಟೆಕ್
ಎಲೆಕ್ಟ್ರಿಕಲ್ ಬ್ರಾಂಚ್ (ಜನರಲ್ ಸರ್ವೀಸ್- ಜಿಎಸ್)- ಬಿಇ/ ಬಿ.ಟೆಕ್
ನೇವಲ್ ಕನ್ ಸ್ಟ್ರಕ್ಟರ್- ಬಿಇ/ ಬಿ.ಟೆಕ್
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ ₹ 56,100
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 29, 2023
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.