ಮನೆ ರಾಜಕೀಯ ಐಡಿ ದಾಳಿಯಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಇದೆ:  ನಳಿನ್ ಕುಮಾರ್ ಕಟೀಲ್

ಐಡಿ ದಾಳಿಯಲ್ಲಿ ಸಿಕ್ಕಿರುವುದು ಕಮಿಷನ್ ಹಣ ಎಂಬ ಮಾಹಿತಿ ಇದೆ:  ನಳಿನ್ ಕುಮಾರ್ ಕಟೀಲ್

0

ಮಂಗಳೂರು(ದಕ್ಷಿಣ ಕನ್ನಡ): ರಾಜ್ಯದಲ್ಲಿ ಇವತ್ತು ಎಟಿಎಂ ಸರ್ಕಾರ ಕೆಲಸ ಮಾಡ್ತಿದೆ. ಬೆಂಗಳೂರಲ್ಲಿ ಅಂಬಿಕಾಪತಿ ಎಂಬ ಗುತ್ತಿಗೆದಾರನ ಮನೆಗೆ ಐಟಿ ದಾಳಿ ಆಗಿದೆ. ಕೆಲ ದಿನಗಳ ಹಿಂದೆ 600 ಕೋಟಿ ಬಾಕಿ ಹಣ ಸರ್ಕಾರ ಬಿಡುಗಡೆ ಮಾಡಿತ್ತು. ಈಗ ಸಿಕ್ಕ ಹಣ ಕಮಿಷನ್ ಹಣ ಎಂಬ ಮಾಹಿತಿ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ಇದು ತೆಲಂಗಾಣದ ಚುನಾವಣೆ ಗೆ ಸಂಗ್ರಹಿಸಲಾದ ಹಣ ಎನ್ನಲಾಗ್ತಿದೆ. ಕೆಲ ಅಧಿಕಾರಿಗಳೇ ಈ ಹಿಂದೆ ರಾಜ್ಯಪಾಲರಿಗೆ ಕಮಿಷನ್ ಬಗ್ಗೆ ದೂರು ಕೊಟ್ಟಿದ್ದರು. ನಾವು ಚುನಾವಣೆ ಹೊತ್ತಲ್ಲೇ ಇದು ಎಟಿಎಂ ಸರ್ಕಾರ ಅಂದಿದ್ದೆವು. ಹೀಗಾಗಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಹಾಗೂ ಡಿಕೆಶಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ವರ್ಗಾವಣೆಗೆ ರೇಟ್ ಫಿಕ್ಸ್ ಆಗಿದೆ ಅನ್ನೋದು ಸ್ಪಷ್ಟವಾಗಿದೆ. ಭ್ರಷ್ಟಾಚಾರಿಗಳ ಬೆಂಗಾವಲದ ಕಲೆಕ್ಷನ್ ಮತ್ತು ಎಟಿಎಂ ಸರ್ಕಾರ ಕಾಂಗ್ರೆಸ್ ಆಗಿದೆ. ಸುಳ್ಳು ಹೇಳಿ, ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕರ್ನಾಟಕ ಕತ್ತಲೆಯಲ್ಲಿದೆ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ರೈತರಿಗೆ ವಿದ್ಯುತ್ ಇಲ್ಲ, ನಿದ್ದೆಗೆಟ್ಡರೂ ರೈತರಿಗೆ ಕರೆಂಟ್ ಇಲ್ಲ. ಇದೊಂದು ಭ್ರಷ್ಟಾಚಾರದ ಹಾಗೂ ಪರ್ಸಂಟೇಜ್ ಸರ್ಕಾರ ಎಂದು ವ್ಯಂಗ್ಯವಾಡಿದರು. ಇವತ್ತು ಸಿಕ್ಕಿದ ಹಣ ಸಂಪೂರ್ಣ ಭ್ರಷ್ಟಾಚಾರದ ಹಣವಾಗಿದೆ. ಕಾಂಗ್ರೆಸ್ ದೇಶದಲ್ಲಿ ಭೌದ್ದಿಕವಾಗಿಯೂ ದಿವಾಳಿಯಾಗಿದೆ ಅಂದರು.

ಇನ್ನು ಇಸ್ರೇಲ್ ಯುಧ್ದದ ವಿಚಾರದಲ್ಲಿ ಭಯೋತ್ಪಾದಕರಿಗೆ ಬೆಂಬಲ ಕೊಡ್ತಾ ಇದೆ. ಪ್ಯಾಲೇಸ್ತೀನ್ ಪರ ಕಾಂಗ್ರೆಸ್ ಮತ್ತು ಅದರ ಒಕ್ಕೂಟ ನಿಂತಿದೆ. ರಾಜ್ಯದಲ್ಲಿ ಆಡಳಿತ ಹಳಿ ತಪ್ಪಿದೆ ಅನ್ನೋದಕ್ಕೆ ಇವತ್ತಿನ ಭ್ರಷ್ಟಾಚಾರ ಕಾರಣ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಯಾವುದೇ ಕೆಲಸಕ್ಕೆ ಹಿಂಜರಿಯಲ್ಲ. ಈಗಾಗಲೇ ಎರಡು ಗುತ್ತಿಗೆದಾರರು ಇವರ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಟಿ ಯಾರ ಒತ್ತಡದಿಂದಲೂ ದಾಳಿಗಳನ್ನು ಮಾಡಲ್ಲ. ಗುತ್ತಿಗೆದಾರರಿಗೆ ಹಣ ಬಿಡುಗಡೆ ಬೆನ್ನಲ್ಲೇ ಇದು ಹಣ ಸಿಕ್ಕಿರೋದು ಅನುಮಾನ ಹುಟ್ಟಿಸಿದೆ ಎಂದರು.