ಮನೆ ರಾಜ್ಯ ಸುಮಲತಾ ಕಾಂಗ್ರೆಸ್‌ ಸೇರ್ಪಡೆ ಚರ್ಚೆ ಆಗಿಲ್ಲ: ಸಚಿವ ಚಲುವರಾಯಸ್ವಾಮಿ

ಸುಮಲತಾ ಕಾಂಗ್ರೆಸ್‌ ಸೇರ್ಪಡೆ ಚರ್ಚೆ ಆಗಿಲ್ಲ: ಸಚಿವ ಚಲುವರಾಯಸ್ವಾಮಿ

0

ಸಕಲೇಶಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಕಾಂಗ್ರೆಸ್‌ ಸೇರ್ಪಡೆ ವಿಚಾರ ಚರ್ಚೆ ಆಗಿಲ್ಲ. ಈಗ ಯಾವುದೇ ಮೈತ್ರಿ ಇಲ್ಲ. ಹಾಗಾಗಿ ಮಂಡ್ಯ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಇರುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಧರ್ಮಸ್ಥಳ, ಉಡುಪಿ ಪ್ರವಾಸದಿಂದ ಮರಳುವ ವೇಳೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಿ ಮಾತನಾಡಿದರು.

ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಹಾಲಿ ಸಂಸದರ ಸ್ಪರ್ಧೆ ವಿಚಾರದ ಕುರಿತು ಮಾತನಾಡಿದ ಸಚಿವರು, ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಇರುತ್ತಾರೆ. ಕಳೆದ ಚುನಾವಣೆಯೇ ಬೇರೆ ಈ ಚುನಾವಣೆಯೇ ಬೇರೆ. ಸುಮಲತಾ ಬಿಜೆಪಿಯಿಂದ ಸ್ಪರ್ಧಿಸುತ್ತಾರೋ, ಜೆಡಿಎಸ್‌ ನಿಂದ ಕಣಕ್ಕಿಳಿಯುತ್ತಾರೊ ಗೊತ್ತಿಲ್ಲ ಎಂದರು.