ಮನೆ ರಾಜ್ಯ ಮಂಗಳೂರು: 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಮಂಗಳೂರು: 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಬಜಾಲ್‌ ಫೈಜಲ್ ನಗರದ ತೌಸೀಫ್ ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2015 ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣದಲ್ಲಿ ಈತ ಭಾಗಿಯಾಗಿದ್ದ.

ಈ ಎಲ್ಲಾ ಪ್ರಕರಣಗಳಲ್ಲಿ ಈತ ಕೋರ್ಟ್ ಗೆ ಕಳೆದ ನಾಲ್ಕು ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ಹಾಗೂ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿ ಕುಳಿತಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಮಾಹಿತಿ ಸಂಗ್ರಹಿಸಿ ಈತನ ಪತ್ತೆಯ ಕುರಿತು ಈತನ ವಿರುದ್ಧ ಲುಕ್ ಔಟ್ ನೋಟೀಸು ಹೊರಡಿಸಲಾಗಿತ್ತು.

ಈತ ಸೌದಿ ಅರೇಬಿಯಾದ ರಿಯಾದ್ ನಿಂದ ಮಂಗಳೂರಿಗೆ ಬರಲು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈತನು ಬಂದು ಇಳಿದಾಗ ಮುಂಬೈನ ಇಮಿಗ್ರೇಷನ್‌ ಅಧಿಕಾರಿಗಳು ಆತನನ್ನು ಪರಿಶೀಲಿಸಿ ಆತನ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿದ ಬಗ್ಗೆ ಖಚಿತಪಡಿಸಿಕೊಂಡು ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಗೆ ಇಮಿಗ್ರೇಷನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಮಾಹಿತಿಯಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಮುಂಬೈ ವಿಮಾನ ನಿಲ್ದಾಣಕ್ಕೆ ತೆರಳಿ ಆತನನು ವಶಕ್ಕೆ ಪಡೆದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ತೌಸೀಫ್‌ನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಈತನು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬಂಧಿಯಾಗಿದ್ದಾನೆ.