ಕೆ.ಆರ್.ಪೇಟೆ: ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್ ಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಭಾನುವಾರ ಮದ್ಯರಾತ್ರಿ ಸುಮಾರು 12 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ನಡೆದಿದೆ.
ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ಚಾಕು ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ಡಿಸಿಸಿ ಬ್ಯಾಂಕ್ ಹಾಗೂ ವಿ.ಎಸ್.ಎಸ್.ಎನ್. ನೌಕರ ಎಂದು ತಿಳಿದು ಬಂದಿದೆ.
ಘಟನೆ ವಿವರ:
ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕು ದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಇದೆ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್ ಮನು ಹೊಟ್ಟೆಯ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ, ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತು ಸ್ಥಳದಿಂದ ಪರಾರಿಯಾಗಿದ್ದಾರೆ.
ಚಾಕು ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಮೋಹನ್, ಸಿಇಓ ಕಾಂತರಾಜು, ಮಾಜಿ ಅಧ್ಯಕ್ಷರಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಮತ್ತಿತರರು ಗಾಯಾಳು ಬೇಟಿ ಮಾಡಿ ಧೈರ್ಯ ತುಂಬಿದರು.
ನಂತರ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿ ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿ.ಎಸ್.ಎಸ್.ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕು ಎಂದು ಮನವಿ ಮಾಡಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.