ಮನೆ ಅಪರಾಧ ರಾಜೀವ್ ಗಾಂಧಿ ಸರ್ಕಾರಿ ಅಸ್ಪತ್ರೆಯಲ್ಲಿ ಅಗ್ನಿ ಅವಘಡ

ರಾಜೀವ್ ಗಾಂಧಿ ಸರ್ಕಾರಿ ಅಸ್ಪತ್ರೆಯಲ್ಲಿ ಅಗ್ನಿ ಅವಘಡ

0

ಚೆನ್ನೈ(Chennai): ನಗರದ ರಾಜೀವ್ ಗಾಂಧಿ(Rajiv Gandhi) ಸರ್ಕಾರಿ ಆಸ್ಪತ್ರೆಯಲ್ಲಿ(Governament Hospital) ಬುಧವಾರ ಬೆಂಕಿ (Fire) ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ.

ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಜೆ ರಾಧಾಕೃಷ್ಣನ್,  ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.