ಬೆಂಗಳೂರು: ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿರುವ ಹಡಗು. ಬಿಜೆಪಿಯಲ್ಲಿ ಏನೂ ಉಳಿದಿಲ್ಲ, ಸಂಪೂರ್ಣ ನಿರ್ನಾಮವಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಬಿಜೆಪಿಗೆ ಅಷ್ಟು ಶಾಸಕರು ಸಿಗುತ್ತಾರಾ? 5 ಶಾಸಕರು ಕೂಡ ಸಿಗಲ್ಲ. ಆಪರೇಷನ್ ನಂತರ ಬಿಜೆಪಿಯವರ ಕಥೆ ಏನಾಗಿದೆ ಗೊತ್ತಿದೆಯಲ್ಲ. ಬಿಜೆಪಿಯಲ್ಲಿ ನಾಯಕರಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ ಎಂದು ಕಿಡಿಕಾರಿದರು.
ಶಾಸಕ ರಮೇಶ್ ಜಾರಕಿಹೊಳಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ವೈಯಕ್ತಿಕ ಭೇಟಿಯೋ ಅಥವಾ ರಾಜಕೀಯ ಭೇಟಿನೋ ನನಗೆ ಗೊತ್ತಿಲ್ಲ. ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಸೇರುವ ಒಲವು ಇರಬಹುದು. ಬೇರೆ ಪಕ್ಷದ ನಾಯಕರ ಸೇರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.