ಮನೆ ರಾಜಕೀಯ ವಿಜಯದಶಮಿ ನಂತರ ಪಕ್ಷ ಸಂಘಟನೆ: ಹೆಚ್.ಡಿ.ಕುಮಾರಸ್ವಾಮಿ

ವಿಜಯದಶಮಿ ನಂತರ ಪಕ್ಷ ಸಂಘಟನೆ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ಚುನಾವಣೆ ಬಳಿಕ ನಡೆದ ರಾಜಕೀಯ ಘಟನೆಗಳ ಹಿನ್ನಲೆಯಲ್ಲಿ ಹಳೆ ಘಟಕ ವಿಸರ್ಜನೆ ಮಾಡಿ ಹೊಸ ಸಮಿತಿ ರಚನೆ  ಮಾಡಲಾಗಿದೆ. ಪಕ್ಷದಲ್ಲಿ ಪುನಶ್ಚೇತನ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಜವಾಬ್ದಾರಿ ನಿರ್ವಹಣೆ ಮಾಡಲು ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಆದೇಶದಂತೆ ಪಕ್ಷವನ್ನು ಸಶಕ್ತಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾತನಾಡಿದ ಅವರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಎಲ್ಲರ ಸಹಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರನ್ನೂ ವಿಶ್ವಾಸ ತೆಗೆದುಕೊಳ್ಳುವ ಮೂಲಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಪಕ್ಷವನ್ನು ಬಲಿಷ್ಠವಾಗಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತದೆ. ವಿಜಯದಶಮಿ ಬಳಿಕ ಪಕ್ಷ ಸಂಘಟನೆ ಹಾಗೂ ರಾಜ್ಯದ ಸಮಸ್ಯೆ ಹಿನ್ನಲೆಯಲ್ಲಿ ಪರಿಣಾಮವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಇನ್ನು ಕುಟುಂಬ ರಾಜಕಾರಣದ ಕುರಿತಾದ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆಯಾಗಿ, ಕಾಂಗ್ರೆಸ್ ಪಕ್ಷದ ಏನು? ಅವರದೂ ಕುಟುಂಬ ಮೂಲ ಅಲ್ಲವೇ? ಅವರಿಗೆ ಯಾವ ನೈತಿಕತೆ‌ ಇದೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ಎಂದು ಎಚ್ ಡಿ ಕೆ ಪ್ರಶ್ನಿಸಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಪಕ್ಷದ ಮಾಜಿ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ಅಲ್ಕೊಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಕೋರ್ ಕಮಿಟಿ ಸಂಚಾಲಕ ವೈ.ಎಸ್.ವಿ.ದತ್ತ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ ಪಕ್ಷದ ಎಲ್ಲ ನಾಯಕರು ಹಾಜರಿದ್ದರು.