ಮಂಗಳೂರು : ಮಂಗಳೂರು ನಗರದ ಮಂಗಳಾದೇವಿ ನವರಾತ್ರಿ ಉತ್ಸವದ ಸಂದರ್ಭ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನ ಶರಣ್ ಪಂಪ್ ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.
ಅಕ್ಟೋಬರ್ 16ರಂದು ಮಂಗಳಾದೇವಿ ದೇವಸ್ಥಾನದ ಬಳಿಯ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್ವೆಲ್ ಮತ್ತಿತರರು ಕೇಸರಿ ಧ್ವಜ ಕಟ್ಟಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ನಡೆಸುವಂತೆ ಕರೆ ನೀಡಿದ್ದರು. ಇದರ ವಿರುದ್ಧ ಮಂಗಳೂರಿನ ಸಮಾನ ಮನಸ್ಕರ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ಗೆ ಮನವಿ ಸಲ್ಲಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.
ಆ ಬಳಿಕ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ಬುಧವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಇದರ ವಿರುದ್ಧ ಶರಣ್ ಪಂಪ್ವೆಲ್ ಹೈಕೋರ್ಟ್ ಮೆಟ್ಟಿಲೇರಿದ್ದು, ಪೊಲೀಸರು ದಾಖಲಿಸಿದ ಸ್ವಯಂಪ್ರೇರಿತ ದೂರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಅರುಣ್ ಶ್ಯಾಮ್ ಹೈಕೋರ್ಟ್ನಲ್ಲಿ ವಾದಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.