ಮನೆ ಅಪರಾಧ ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0

ಕಲಬುರಗಿ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಶುಕ್ರವಾರ(ಅ.20) ರಾತ್ರಿ ನಡೆದಿದೆ.

ಬಲಭೀಮ್ ಸಗರ್(23) ಕೊಲೆಯಾದ ಯುವಕ.

ಇನ್ನು ಬಲಭೀಮ ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ. ಹಳೇ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ರೇವೂರು ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.