ಮನೆ ಸುದ್ದಿ ಜಾಲ ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲು

0

ಕಠ್ಮಂಡು: ನೇಪಾಳದ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ.

ಇಂದು ಬೆಳಿಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ ಬಿಂದು ಧಾಡಿಂಗ್​ನಲ್ಲಿದೆ ಎಂದು ತಿಳಿದುಬಂದಿದೆ.

ಬಾಗ್ಮತಿ ಹಾಗೂ ಗಂಡಕಿ ಪ್ರಾಂತ್ಯದ ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ. ಕಂಪನದಿಂದ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಟಿಬೆಟ್ ಹಾಗೂ ಭಾರತೀಯ ಟೆಕ್ಟೋನಿಕ್ ಪ್ಲೇಟ್​ಗಳು ಸಂಧಿಸುವ ಸ್ಥಳದಲ್ಲಿ ಅಪ್ಪಳಿಸಿದೆ.

ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಾಗಿದೆ. ಇದು ಟಿಬೆಟಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‌ಗಳು ಸಂಧಿಸುವ ಪರ್ವತಶ್ರೇಣಿಯ ಮೇಲೆ ನೆಲೆಗೊಂಡಿದೆ ಮತ್ತು ಪ್ರತಿ ಶತಮಾನಕ್ಕೂ ಎರಡು ಮೀಟರ್‌ಗಳಷ್ಟು ಒಂದಕ್ಕೊಂದು ಹತ್ತಿರವಾಗುತ್ತವೆ.

ಇದು ಭೂಕಂಪನಗಳ ರೂಪದಲ್ಲಿ ಬಿಡುಗಡೆಯಾಗುವ ಒತ್ತಡಕ್ಕೆ ಕಾರಣವಾಗುತ್ತದೆ. 2015ರಲ್ಲಿ ನೇಪಾಳದಲ್ಲಿ 7.8 ತೀವ್ರತೆಯ ಭೂಕಂಪನ ಉಂಟಾಗಿತ್ತು. ಇದರಲ್ಲಿ 9,000 ಮಂದಿ ಸಾವನ್ನಪ್ಪಿದ್ದರು. PDNA ವರದಿಯಂತೆ ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.