ಮನೆ ಮನರಂಜನೆ ನ.24 ರಂದು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಬಿಡುಗಡೆ

ನ.24 ರಂದು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಬಿಡುಗಡೆ

0

ನಟಿ ರಮ್ಯಾ ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ರಮ್ಯಾ ಅವರು ಈ ಮೊದಲು ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದಿಂದ ದೂರವೇ ಇದ್ದರು. ಆ ಬಳಿಕ ಅವರು ನಿಧಾನವಾಗಿ ಚಿತ್ರರಂಗದ ಜೊತೆ ಸಂಪರ್ಕ ಬೆಳೆಸಿಕೊಳ್ಳುತ್ತಾ ಬಂದರು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾನ ನಿರ್ಮಾಣ ಮಾಡುವುದರ ಜೊತೆಗೆ  ಈ ಚಿತ್ರದಲ್ಲಿ ನಟಿಸುವುದಾಗಿ ಅವರು ಮೊದಲು ಹೇಳಿದ್ದರು. ಆದರೆ, ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ.

‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಸದ್ಯ ಈ ವಿಚಾರ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ರಮ್ಯಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.