ದೇವಘರ್: ಕಾರೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಾರ್ಖಂಡ್ ನ ದೇವಘರ್ ಜಿಲ್ಲೆಯಲ್ಲಿ ನಡೆದಿದೆ.
ಕಾರಿನ ಚಾಲಕ ಮಾತ್ರ ಬದುಕುಳಿದಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮುಖೇಶ್ ರೈ (30) ಲವ್ಲಿ ಕುಮಾರಿ (27) ರೋಶನ್ ಚೌದರಿ(23) ಹಾಗೂ ಒಂದೂವರೆ ವರ್ಷದ ಬಾಲಕ ಎಂದು ಗುರುತಿಸಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಡ್ರೈವ್ ಮಾಡುತ್ತಿದ್ದ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ.
Saval TV on YouTube