ಮನೆ ರಾಜ್ಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದ ಬಸ್: ಹಲವರಿಗೆ ಗಾಯ

ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದ ಬಸ್: ಹಲವರಿಗೆ ಗಾಯ

0

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯ ಬಳಿ ನಡೆದಿದೆ.

ನಿನ್ನೆ ತಡರಾತ್ರಿ ಊಟಿಯಿಂದ ಮೈಸೂರು ಕಡೆಗೆ ಬರುತ್ತಿದ್ದ ಬಸ್, ಮೇಲುಕಾಮನಹಳ್ಳಿ ಬಳಿ ಕಾಡಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಪಾರು ಪ್ರಾಣಾಪಾಯರಾಗಿದ್ದಾರೆ. ಇನ್ನು ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿದೆ.

ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಊಟಿ ನೋಡಿಕೊಂಡು ಬರುತ್ತಿರುವಾಗ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ 24 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.