ಮನೆ ರಾಜ್ಯ ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: 13 ಮಂದಿ ಸಾವು

0

ಚಿಕ್ಕಬಳ್ಳಾಫುರ: ಬಲ್ಕರ್ ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  13 ಮಂದಿ ಸಾವನ್ನಪ್ಪಿದ್ದಾರೆ.

ಇಂದು (ಅ.26) ನಸುಕಿನ ವೇಳೆ ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ.

ಟಾಟಾ ಸುಮೊ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ಆದರೆ, ದಟ್ಟ ಮಂಜು ಹಿನ್ನೆಲೆಯಲ್ಲಿ ಟಾಟಾ ಸುಮೊ ಚಾಲಕನಿಗೆ ಸರಿಯಾಗಿ ರಸ್ತೆ ಕಾಣಿಸಿಲ್ಲ. ಇದರಿಂದ ರಸ್ತೆಬದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿ ರಭಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತರು ಆಂಧ್ರದ ಗೊರಂಟ್ಲ ನಿವಾಸಿಗಳು ಎನ್ನುವುದು ಗೊತ್ತಾಗಿದೆ. ಒಬ್ಬೊಬ್ಬರು ಒಂದೊಂದು ಊರಿನವರು ಎಂಬ ಮಾಹಿತಿ ಲಭ್ಯವಾಗಿದೆ.