ಮನೆ ಕ್ರೀಡೆ ವಿಶ್ವಕಪ್: ಇಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿ

ವಿಶ್ವಕಪ್: ಇಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿ

0

ಹೈದರಾಬಾದ್: ಇಂದು ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವೆ ಪಂದ್ಯ  ನಡೆಯಲಿದೆ. ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳು ಸೆಣಸಲಿವೆ.

ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನದ ಪಾಲಿಗೆ ಇಂದಿನ ಪಂದ್ಯ ಮಾಡು ಇಲ್ಲ ಮಡಿ ಎಂಬಂತಾಗಿದೆ. ಒಂದು ವೇಳೆ, ಈ ಪಂದ್ಯದಲ್ಲಿ ಬಾಬರ್ ಪಡೆ ಸೋತಿದ್ದೆ ಆದಲ್ಲಿ ಸೆಮಿಸ್ ಬಾಗಿಲು ಮುಚ್ಚಿಕೊಳ್ಳಲಿವೆ.  ದಕ್ಷಿಣ ಆಫ್ರಿಕಾ ಇಂದು ಗೆದ್ದರೆ ಟೇಬಲ್ ಟಾಪರ್ ಆಗಲಿದೆ, ಭಾರತ ದ್ವಿತೀಯ ಸ್ಥಾನಕ್ಕೆ ಕುಸಿಯಲಿದೆ.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.

ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.