ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಜಿಲ್ಲಾಡಳಿತ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಪ್ರಕಟಣೆ ಹೊರಡಿಸಿದ್ದಾರೆ.
ನವೆಂಬರ್ 1 ರಂದು ರಾಜ್ಯದ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯವನ್ನು ಬರೆಯುವಂತೆ ನಾಗರಿಕರಲ್ಲಿ ಮನವಿ ಮಾಡಲಾಗಿದೆ.
ಬೆಳಿಗ್ಗೆ 9.00 ಗಂಟೆಗೆ ಎಲ್ಲಾ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆಯನ್ನು ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಕನ್ನಡ ನಾಡಿನ ಸಮಸ್ಯೆ ನಾಗರಿಕರು ಎದ್ದು ನಿಂತು ರಾಷ್ಟ್ರ ಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೂ ಗೌರವ ಸಲ್ಲಿಸಲು ಮನವಿ ಮಾಡಲಾಗಿದೆ.
ಅಂದು ಸಂಜೆ 5 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಹಳದಿ ಬಣ್ಣದ ಗಾಳಿಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ, ಗಾಳಿಪಟ ಉತ್ಸವ ಆಚರಿಸುವುದು.
ಸಂಜೆ 7.00 ಗಂಟೆಗೆ ನಿಮ್ಮ-ನಿಮ್ಮ ಜಿಲ್ಲೆಗಳ ಎಲ್ಲಾ ಗ್ರಾಮಗಳ ಮನೆಗಳ ಮುಂದೆ, ಕಛೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ (ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗುವುದು.
ಈ ಸಂಬಂಧ ಜಿಲ್ಲಾಡಳಿತ ಸೂಕ್ತ ಸುತ್ತೋಲೆಗಳನ್ನು ಹೊರಡಿಸಿ, ಜಿಲ್ಲೆಯ ಎಲ್ಲಾ ನಾಗರಿಕರ ಸಂಘ ಸಂಸ್ಥೆಗಳ ಸಹಯೋಗ ಪಡೆದು – ಕಾರ್ಯಕ್ರಮ ಯಶಸ್ವಿಗೊಳಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಸೂಚನೆ ನೀಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.