ಮನೆ ರಾಷ್ಟ್ರೀಯ ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನ

0

ಕೋಲ್ಕತ್ತಾ (Kolkata )- ದೆಹಲಿಯ ಜಹಾಂಗಿರ್‌ಪುರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಫರೀದ್ ಅಲಿಯಾಸ್ ನೀತು ಅನ್ನು ದೆಹಲಿಯ ಅಪರಾಧ ದಳದ ಪೊಲೀಸರು ಗುರುವಾರ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಆತನನ್ನು ವಿಮಾನದ ಮೂಲಕ ನವದೆಹಲಿಗೆ ಕರೆತರಲಾಗಿದೆ.

ಈತ ಕೋಮುಗಲಭೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮತ್ತು ಪ್ರಮುಖ ಪಾತ್ರ ವಹಿಸಿದ್ದ. ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗಿರುವ ನಮ್ಮ ತಂಡವು ಗುರುವಾರ ತಮ್ಲುಕ್ ಹಳ್ಳಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಯಿಂದ ಆತನನ್ನು ಬಂಧಿಸಿದೆ.

ಬಂಧಿತ ಆರೋಪಿ ವಿರುದ್ಧ 2010 ರಿಂದ ದರೋಡೆ, ಕಳ್ಳತನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಆರು ಪ್ರಕರಣಗಳು ದಾಖಲಾಗಿವೆ. ಈತ ಜಹಾಂಗೀರ್‌ಪುರಿ ಪ್ರದೇಶದ ರೌಡಿ ಶೀಟರ್ ಸಹ ಆಗಿದ್ದ.

ಏಪ್ರಿಲ್ 16 ರಂದು ರಾಷ್ಟ್ರ ರಾಜಧಾನಿಯ ಜಹಾಂಗಿರ್‌ಪುರಿಯಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿತ್ತು. ಘರ್ಷಣೆಯಲ್ಲಿ ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಘರ್ಷಣೆಯ ಸಮಯದಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಗಲಾಟೆ ಬಳಿಕ ಆರೋಪಿಗಳು ದೆಹಲಿಯಿಂದ ಪರಾರಿಯಾಗಿದ್ದರು. ಅಂದಿನಿಂದ, ಅವರು ತಮ್ಮ ಸ್ಥಳಗಳನ್ನು ಬದಲಾಯಿಸುತ್ತಿದ್ದರು ಮತ್ತು ಪಶ್ಚಿಮ ಬಂಗಾಳದಾದ್ಯಂತ ಓಡಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂಸಾಚಾರ ನಡೆದು ಕೆಲ ದಿನಗಳ ನಂತರ, ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪಗಳ ಅಡಿ ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪತ್ರ ಬರೆದಿದ್ದರು.

ಪ್ರಕರಣದ ಐವರೂ ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.