ಸೂರತ್: ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ಶನಿವಾರ (ಅ.28 ರಂದು) ನಡೆದಿದೆ.
ಸೂರತ್‌ನ ಪಾಲನ್ ಪುರ ಜಕತ್ನಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.
6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು ಎಂದು ಬರೆದಿರುವ ಪತ್ರವನ್ನು ಪೊಲೀಸರು ಘಟಾನ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದಲೇ ಈ ಹೆಜ್ಜೆಯನ್ನಿಟ್ಟಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.
ಫರ್ನಿಚರ್ ವ್ಯವಹಾರವನ್ನು ಮಾಡುತ್ತಿದ್ದ ಮನೀಶ್ ಸೋಲಂಕಿ ಅವರಿಗೆ ಶನಿವಾರ ಮುಂಜಾನೆ ಕೆಲಸಗಾರರು ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದಿದ್ದಾಗ ಮನೆಯ ಬಳಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.