ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್ ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಹತ್ಯೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು, ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ ಎಂಬ ಮೇಲ್ ಬಂದಿದೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.