ಮನೆ ಅಪರಾಧ ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ

0

ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ ದಲಿತ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಮದ್ಲಾಪುರ ಬಳಿ ನಡೆದಿದೆ.

ದಲಿತ ಮುಖಂಡ ಪ್ರಸಾದ್(40) ಹತ್ಯೆ ಮಾಡಲಾಗಿದೆ.

ಬೈಕ್​​ ಅಡ್ಡಗಟ್ಟಿ‌ ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ರಾಯಚೂರು ಎಸ್ ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ವಿ ತಾಲೂಕು ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.