ಮನೆ ಕ್ರೀಡೆ ವಿಶ್ವಕಪ್:  ಇಂದು ಪಾಕಿಸ್ತಾನ – ಬಾಂಗ್ಲಾದೇಶ ಮುಖಾಮುಖಿ

ವಿಶ್ವಕಪ್:  ಇಂದು ಪಾಕಿಸ್ತಾನ – ಬಾಂಗ್ಲಾದೇಶ ಮುಖಾಮುಖಿ

0

ಐಸಿಸಿ ಏಕದಿನ ವಿಶ್ವಕಪ್ ನಲ್ಲಿಂದು ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಸೆಮಿ ಫೈನಲ್ ಗೇರಲು ಕೂದಲೆಳೆಯಷ್ಟು ಅವಕಾಶ ಹೊಂದಿರುವ ಬಾಬರ್ ಪಡೆಗೆ ಈ ಪಂದ್ಯ ಮಹತ್ವದ್ದಾಗಿದೆ. ಪಾಕಿಸ್ತಾನ  ಈ ಪಂದ್ಯ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಬಾಂಗ್ಲಾದೇಶ ಈಗಾಗಲೇ ಟೂರ್ನಿಯಿಂದ ಔಟ್ ಆಗಿದೆ.

ಪಾಕಿಸ್ತಾನ ತಂಡ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ.

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.