ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ (ಆರ್‌ಐಎಲ್) ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಮೂರನೇ ಬಾರಿಗೆ ಬೆದರಿಕೆ ಇಮೇಲ್ ಬಂದಿದ್ದು, 400 ಕೋಟಿ ಹಣಕ್ಕೆ ಬೇಡಿಕೆಯಿಡಲಾಗಿದೆ.
ಸೋಮವಾರ ಇ –ಮೇಲ್ ಬಂದಿದ್ದು, ನಾಲ್ಕು ದಿನಗಳಲ್ಲಿ 3ನೇ ಬಾರಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಶುಕ್ರವಾರ ₹20 ಕೋಟಿ ನೀಡದಿದ್ದರೆ ಗುಂಡಿಕ್ಕಿ ಕೊಲೆ ಮಾಡುವುದಾಗಿ ವ್ಯಕ್ತಿಯೊಬ್ಬರು ಇ–ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದರು. ಶನಿವಾರ ₹200 ಕೋಟಿ ಹಣಕ್ಕೆ ಬೇಡಿಕೆ ಇಟ್ಟು ಇ– ಮೇಲ್ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಮುಂಬೈನ ಗಾಮ್ದೇವಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇ–ಮೇಲ್ ಕಳುಹಿಸುವವರನ್ನು ಪತ್ತೆಹಚ್ಚುವ ಕೆಲಸ ಮಾಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷ, ಬಿಹಾರದ ದರ್ಭಾಂಗದಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದರು. ಆರೋಪಿಗಳು ಮುಂಬೈನಲ್ಲಿರುವ ಸರ್ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.