ಕಲಬುರಗಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂಭ್ರದಲ್ಲಿರುವಾಗಲೇ ಕಲಬುರಗಿ ನಗರದಲಿ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದೆ.
ಪರಿಣಾಮ ಬುಧವಾರ ಸರದಾರ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ ಬೆಳಗ್ಗೆ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸಲು ಮಾಡಲು ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಹಾಗೂ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳಿಯನ್ನು ಪೊಲೀಸರು ಬಂಧಿಸಿದರು.
ಕಳೆದ ಐದು ವರ್ಷಗಳಿಂದ ಶಾಂತವಾಗಿದ್ದ ಹೋರಾಟಗಾರರು ಬೆಳಗ್ಗೆ ಪ್ರತ್ಯೇಕ ರಾಜ್ಯ ಹೋರಾಟ ಆರಂಭಿಸುತ್ತೇವೆ ಎಂದು ಘೋಷಣೆ ಕೂಗೂತ್ತ ವೃತ್ತದತ್ತ ನುಗ್ಗಿದರು.
ಸಮಿತಿಯ ಸದಸ್ಯರು ನಗರದ ಕೋರ್ಟ್ ಸರ್ಕಲ್ ಬಳಿ ಜಮಾಗೊಂಡು ಪ್ರತ್ಯೇಕ ರಾಜ್ಯದ ಬಾವುಟದೊಂದಿಗೆ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಮೆರವಣಿಗೆ ಹೊರಟರು.
ಸರದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ತೆರಳಿ ಅಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಮಾಡಲು ಹೋಗುತ್ತಿದ್ದವರನ್ನು ಪೊಲೀಸರು ಯುನೈಟೆಡ್ ಆಸ್ಪತ್ರೆಯ ಬಳಿ ತಡೆದು ನಿಲ್ಲಿಸಿದರು. ಮಾರ್ಗ ಮಧ್ಯದಲ್ಲಿ ೨0 ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ ಕರೆದುಕೊಂಡು ಹೋದರು.
ಸಮಿತಿ ಅಧ್ಯಕ್ಷ ಎಂ.ಎಸ್ .ಪಾಟೀಲ್, ಮುಖಂಡರಾದ ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ , ಲಕ್ಷ್ಮೀ ಕಾಂತ ಸ್ಚಾದಿ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.
ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.