ಮನೆ ಸ್ಥಳೀಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಳಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಳಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭೇಟಿ

0

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಿರ್ಮಿಸಿರುವ ಸಮಾಜ ಕಲ್ಯಾಣ ಇಲಾಖೆ ಮಳಿಗೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಳಿಗೆಗೆ ಭೇಟಿ ನೀಡಿ ವೀಕ್ಷಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ನವೀನ್ ಕುಮಾರ್ ರಾಜ್, ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕಿ ಡಾ.ವಸುಂದರಾ, ಕ್ರೈಸ್ ಸಂಸ್ಥೆಯ ಸಲಹೆಗಾರ ಡಾ.ತುಕಾರಂ, ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ಸಲಹೆಗಾರ ದೇವನೂರ ಬಸವರಾಜು, ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ರಾಜೇಶ್ ಜಿ.ಗೌಡ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.