ಮನೆ ಕ್ರೀಡೆ ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಸೌತ್ ಆಫ್ರಿಕಾಗೆ ಗೆಲುವು

ವಿಶ್ವಕಪ್: ನ್ಯೂಜಿಲೆಂಡ್ ವಿರುದ್ಧ ಸೌತ್ ಆಫ್ರಿಕಾಗೆ ಗೆಲುವು

0

ಪುಣೆ (ಮಹಾರಾಷ್ಟ್ರ): ಪುಣೆ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ದ ಬೌಲರ್ ಗಳು ನ್ಯೂಜಿಲೆಂಡ್ ತಂಡವನ್ನು 36 ಓವರ್ ನಲ್ಲಿ167 ರನ್ ಗೆ ಆಲ್ ಔಟ್ ಮಾಡಿದರು. ಇದರಿಂದ ಸೌತ್ ಆಫ್ರಿಕಾ, ಕಿವೀಸ್ ವಿರುದ್ಧ 190 ರನ್ ಗಳ ಅಂತರದ ಗೆಲುವು ದಾಖಲಿಸಿದೆ.

ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ಹಂಗಾಮಿ ನಾಯಕ ಟಾಮ್ ಲಾಥಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡ ಪರ ಕ್ವಿಂಟನ್ ಡಿಕಾಕ್ (114) ಹಾಗೂ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (133) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕಗಳ ನೆರವಿನೊಂದಿಗೆ ಸೌತ್ ಆಫ್ರಿಕಾ ತಂಡವು ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು.

358 ರನ್ ಗಳ ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವನ್ನು 35.3 ಓವರ್ ಗಳಲ್ಲಿ ಕೇವಲ 167 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಸೌತ್ ಆಫ್ರಿಕಾ ಬೌಲರ್ ಗಳು ಯಶಸ್ವಿಯಾಗಿದ್ದಾರು . ಈ ಮೂಲಕ ಸೌತ್ ಆಫ್ರಿಕಾ ತಂಡ 190 ರನ್ ಗಳ ಭರ್ಜರಿ ಜಯ ಸಾಧಿಸಿದೆ.