ಮೈಸೂರು: ಮೈಸೂರಿನಲ್ಲಿ ದನ ಮೇಯಿಸುತ್ತಿದ್ದ ರೈತನ ಮೇಲೆ ಹುಲಿ ದಾಳಿ ಪ್ರಕರಣ ಸಂಬಂಧ , ಹುಲಿ ಸೆರೆಗೆ ಶೀಘ್ರದಲ್ಲೇ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಭರವಸೆ ನೀಡಿದ್ದಾರೆ.
ನಂಜನಗೂಡು ತಾಲೂಕಿನ ಮಹದೇವರನಗರ ಗ್ರಾಮದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿತ್ತು. ಈ ವೇಳೆ ರೈತ ವೀರಭದ್ರ ಭೋವಿ ಅವರು ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಪದೇ ಪದೇ ಹುಲಿ ದಾಳಿಯಿಂದ ಬೇಸತ್ತ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಕುರಿತು ಮಾತನಾಡಿರುವ ಶಾಸಕ ದರ್ಶನ್ ಧ್ರುವನಾರಾಯಣ್, ಹುಲಿ ಸೆರೆಗೆ ಶೀಘ್ರದಲ್ಲೇ ಕೂಂಬಿಂಗ್ ಆಪರೇಷನ್ ಆರಂಭಿಸಲಾಗುತ್ತದೆ. ಹುಲಿ ಸೆರೆಗೆ ಆನೆಗಳನ್ನ ಬಳಸಿಕೊಳ್ಳಲಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಹುಲಿ ದಾಳಿಯಲ್ಲಿ ಗಾಯಗೊಂಡ ರೈತ ವೀರಭದ್ರ ಭೋವಿ ಅವರ ಖರ್ಚು ವೆಚ್ಚಗಳನ್ನು ಸರ್ಕಾರ ಮತ್ತು ಅರಣ್ಯ ಇಲಾಖೆ ಭರಿಸುತ್ತದೆ. ನಾನು ಕೂಡ ವೈಯಕ್ತಿಕವಾಗಿ ಪರಿಹಾರ ನೀಡಿ ಆತ್ಮಸ್ಥೈರ್ಯ ತುಂಬಿದ್ದೇನೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.