ಮನೆ ಅಪರಾಧ ಬೆಂಗಳೂರು: ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಸಿಸಿಬಿ ದಾಳಿ

0

ಬೆಂಗಳೂರು: ನ್ಯೂ ತಿಪ್ಪಸಂದ್ರ ಮುಖ್ಯರಸ್ತೆ ಹಾಗೂ ಜ್ಞಾನಭಾರತಿ  ಬಳಿ ಅಕ್ರಮವಾಗಿ  ಪಟಾಕಿ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೇ ಪಟಾಕಿಯನ್ನು ಅಕ್ರಮವಾಗಿ ಸಾಗಿಸಲಾಗಿತ್ತು‌. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಎರಡೂ ಕಡೆ ದಾಳಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಜೀವನ್‌ ಭಿಮಾನಗರ ಠಾಣೆ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯಲ್ಲಿರುವ ಗೋದಾಮಿನಲ್ಲಿ 25 ಲಕ್ಷ ರೂ. ಮೌಲ್ಯದ ಗೋದಾಮು ಹಾಗೂ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿದ್ದ ಗೋದಾಮಿನಲ್ಲಿ 15 ಲಕ್ಷ ರೂ. ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ.

ಎರಡೂ ಗೋದಾಮು ಮಾಲೀಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.