ಮನೆ ರಾಜಕೀಯ ರಾಜಕಾರಣ ಬಿಟ್ರು ಸ್ವಾಭಿಮಾನ, ಸಿದ್ದಾಂತ ಬಿಡಲ್ಲ: ಸಂಸದೆ ಸುಮಲತಾ

ರಾಜಕಾರಣ ಬಿಟ್ರು ಸ್ವಾಭಿಮಾನ, ಸಿದ್ದಾಂತ ಬಿಡಲ್ಲ: ಸಂಸದೆ ಸುಮಲತಾ

0

ಮಂಡ್ಯ: ನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ.  ರಾಜಕಾರಣ ಬಿಟ್ರು ಸ್ವಾಭಿಮಾನ, ಸಿದ್ದಾಂತ ಬಿಡಲ್ಲ. ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗಲ್ಲ ಎಂದು ಜೆಡಿಎಸ್‌-ಬಿಜೆಪಿ ಮೈತ್ರಿ ಕುರಿತು ಸಂಸದೆ ಸುಮಲತಾ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದಲ್ಲಿ ಸಂಸದೆ ಸುಮಲತಾ ಮಾತನಾಡಿ, ಜೆಡಿಎಸ್‌ ಬಿಜೆಪಿ ಮೈತ್ರಿ ಆಗಿದೆ ಆದರೆ ಕ್ಷೇತ್ರ ಹಂಚಿಕೆ ಇನ್ನು ಆಗಿಲ್ಲ.  ಈಗ ಎದ್ದಿರುವ ಊಹಾಪೋಹಗಳಿಗೆ ಪ್ರತಿಕ್ರಿಯೆ ಕೊಡಲ್ಲ. ನಾನು ದುಡುಕಿನ ನಿರ್ಧಾರ ಮಾಡಲ್ಲ. ಕ್ಷೇತ್ರ ಹಂಚಿಕೆ ಬಗ್ಗೆ ಮಾತುಕತೆ ನೂರಾರು ನಡೆದಿರಬಹುದು.  ಆದರೆ ಇನ್ನು ಯಾವುದೇ ಕ್ಷೇತ್ರ ಹಂಚಿಕೆ ಕನ್ಫರ್ನ್ ಆಗಿಲ್ಲ. ಮಂಡ್ಯ ಜನ ನನ್ನ ಜೊತೆ ಇದ್ದಾರೆ, ನನಗೆ ಆ ಕಾನ್ಫಿಡೆನ್ಸ್ ಇದೆ.  ಈ ಕ್ಷೇತ್ರ ಬೇಕು, ಆ ಕ್ಷೇತ್ರ ಬೇಕು ಎಂದು ಯಾವ ಪಕ್ಷವನ್ನು ಕೇಳಿಲ್ಲ ಎಂದು ತಿಳಿಸಿದರು.

ನನ್ನ ರಾಜಕೀಯ ಭವಿಷ್ಯದ ಬಗ್ಗೆ ನನಗೆ ಯೋಚನೆ ಇಲ್ಲ.  ಬೆಂಗಳೂರು ಉತ್ತರ ಆಫರ್  ಕಳೆದ ಚುನಾವಣೆಯಲ್ಲೇ ನಿರಾಕರಿಸಿದ್ದೆ.  ನನಗೆ ಈ ಸ್ಥಾನಮಾನ ಕೊಟ್ಟಿದ್ದು ಮಂಡ್ಯ ಜನರು.  ಬೇರೆ ಕ್ಷೇತ್ರದ ಆಫರ್ ಎಂದಿಗೂ ಒಪ್ಪಲ್ಲ.  ಇದನ್ನ ನೂರಾರು ಬಾರಿ ಹೇಳಿದ್ದೇನೆ. ಇನ್ನು ರಕ್ತದಲ್ಲಿ ಬರೆದು ಕೊಡಬೇಕಾ?  ಮಂಡ್ಯ ಜಿಲ್ಲೆ ರಾಜಕಾರಣ ಯಾವಾಗಲೂ ಚಾಲೆಂಜಿಂಗ್. ಚಾಲೆಂಜ್‌ಗೆ ಹೆದರುವ ಸ್ವಭಾವ ನನ್ನದ್ದಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ, ಅವರವರ ಪಕ್ಷದ ಆಂತರಿಕ ವಿಚಾರ, ನಾನು ಕಮೆಂಟ್ ಮಾಡಲ್ಲ. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಹಾಗೂ ನೀರಿನ ಸಮಸ್ಯೆ ಇದೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಫ್ರೀ ಗ್ಯಾರಂಟಿ ಕೊಟ್ಟರೆ ಅಭಿವೃದ್ಧಿ ಕೆಲಸ ಆಗಲ್ಲ ಎಂದು ಮೊದಲೇ ಹೇಳಿದ್ವಿ.  ಚುನಾವಣೆ ಗೆಲ್ಲುವ ಉದ್ದೇಶದಿಂದ ಬರೀ ಫ್ರೀ ಫ್ರೀ ಎಂದು ಕೊಟ್ಟರೆ ತೊಂದರೆ ಆಗುತ್ತದೆ.  ಅಭಿವೃದ್ಧಿ ಕೆಲಸಗಳಿಗೆ ದುಡ್ಡು ಎಲ್ಲಿಂದ ತರ್ತೀರಾ?  ಫಂಡ್ಸ್ ಹುಟ್ಸೋಕೆ ಆಗಲ್ಲ, ಇರೋದರಲ್ಲೇ ಮಾಡಬೇಕು.  ನೀವು ಫೀ ಕೊಡ್ತಿರುವ ಜನರಿಗೆ ತೊಂದರೆ ಆಗುತ್ತದೆ.  ಈಗ ಜನರಿಗೂ ಇದು ಗೊತ್ತಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಕೂಡ ಗ್ಯಾರಂಟಿ‌ಗಳ ಚಾಲೆಂಜ್ ಫೇಸ್ ಮಾಡ್ತಿದೆ ಎಂದು ಹೇಳಿದರು.

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಮಾತನಾಡಿ, ಕಾವೇರಿ ನೀರು ಹಂಚಿಕೆ ವಿಚಾರ ಪದೇ ಪದೇ ಏಕೆ ನಮ್ಮ ವಿರುದ್ಧ ತಮಿಳುನಾಡು ಪರ ತೀರ್ಪು ಹೋಗುತ್ತಿದೆ ಎನ್ನುವುದು ಅರ್ಥ ಆಗದೇ ಇರುವಂತಹ ವಿಚಾರನೇ ಎಂದರು.

ನಮ್ಮ ಮಟ್ಟಿಗೆ ನಾವು ಅಲ್ಲಿ ವಾದ ಮಾಡುವುದರಲ್ಲಿ ಫೇಲ್ ಆಗ್ತಿದ್ದೀವಾ ಅನ್ನೋದೇ ಒಂದು ದೊಡ್ಡ ಪ್ರಶ್ನೆ. ಅವರ ಕಡೆಯಿಂದ ನಾವು ಯೋಚನೆ ಮಾಡಿದರೆ ಯಾವ ಒಂದು ಸ್ಟೇಟ್ ಮಾತನಾಡಿರುವ ಉದಾಹರಣೆ ಈವರೆಗೂ ಇಲ್ಲ.  ನೀರಿಲ್ಲ ನೀವು ಇಟ್ಕೊಳ್ಳಿ ನೀರು ಕೊಡಿ ಅಂತ ಯಾವ ಸ್ಟೇಟ್ ಪರವಾಗಿಯೂ ಮಾತನಾಡಿಲ್ಲ.  ಮುಂದೇನು ಮಾತನಾಡುವುದಿಲ್ಲ ಅಂದುಕೊಂಡಿದ್ದೇನೆ.  ನಮ್ಮ ಒಂದು ಹೋರಾಟವನ್ನು ಎಷ್ಟು ಜವಾಬ್ದಾರಿಯಿಂದ ಮಾಡುತ್ತಿದ್ದೇವೆ. ಎನ್ನುವುದೇ ಒಂದು ಪ್ರಶ್ನೆಯಾಗಿ ಉಳಿದಿದೆ ಎಂದು ತಿಳಿಸಿದರು.