ಮನೆ ಅಂತಾರಾಷ್ಟ್ರೀಯ ನೇಪಾಳದಲ್ಲಿ ಭೂಕಂಪ: ಅಗತ್ಯ ನೆರವು ನೀಡಲು ಭಾರತ ಸಿದ್ದ- ಪ್ರಧಾನಿ ಮೋದಿ

ನೇಪಾಳದಲ್ಲಿ ಭೂಕಂಪ: ಅಗತ್ಯ ನೆರವು ನೀಡಲು ಭಾರತ ಸಿದ್ದ- ಪ್ರಧಾನಿ ಮೋದಿ

0

ನವದೆಹಲಿ: ನೇಪಾಳದಲ್ಲಿ ಪ್ರಬಲ ಭೂಕಂಪದಿಂದ ಉಂಟಾದ ಜೀವ ಹಾನಿ ಮತ್ತು ಅಪಾರ ಆಸ್ತಿ ಹಾನಿಯಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

”ಭಾರತವು ತನ್ನ ನೆರೆಯ ರಾಷ್ಟ್ರ ನೇಪಾಳದ ಬೆಂಬಲಕ್ಕೆ ನಿಂತಿದೆ. ಸಾಧ್ಯವಿರುವ ಎಲ್ಲ ನೆರವುಗಳನ್ನು ನೀಡಲು ಸಿದ್ಧವಾಗಿದೆ” ಎಂದು ಮೋದಿ ತಿಳಿಸಿದ್ದಾರೆ.

ಶುಕ್ರವಾರ ಮಧ್ಯರಾತ್ರಿ ಪಶ್ಚಿಮ ನೇಪಾಳದ ದೂರದ ಪರ್ವತ ಪ್ರದೇಶದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, ಕನಿಷ್ಠ 128 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ, ರಾತ್ರಿ 11.47ಕ್ಕೆ ಜಾಜರ್ಕೋಟ್ ಜಿಲ್ಲೆಯಲ್ಲಿ ಭೂಕಂಪನ ದಾಖಲಾಗಿದೆ. ನೇಪಾಳದ ಜಾಜರ್ಕೋಟ್, ರುಕುಮ್ ಪಶ್ಚಿಮದ ಪ್ರತ್ಯೇಕ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ತೀವ್ರಗೊಂಡಿದೆ.

ಹಲವೆಡೆ ಸಂಪರ್ಕ ಕಡಿತಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶನಿವಾರ ಬೆಳಿಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.