ಮನೆ ರಾಜಕೀಯ ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆಗುವುದಾದರೆ ಜೆಡಿಎಸ್ ​ನ 19 ​​ ಶಾಸಕರ ಬೆಂಬಲ: ಹೆಚ್...

ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆಗುವುದಾದರೆ ಜೆಡಿಎಸ್ ​ನ 19 ​​ ಶಾಸಕರ ಬೆಂಬಲ: ಹೆಚ್ ​ಡಿ ಕುಮಾರಸ್ವಾಮಿ

0

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್​ ನಾಳೆ ಸಿಎಂ ಆಗುವುದಾದರೆ ಜೆಡಿಎಸ್ ​ನ 19 ​​ ಶಾಸಕರ ಬೆಂಬಲ ಇದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಮೊನ್ನೆ ಸಿಎಂ ಸಿದ್ದರಾಮಯ್ಯ ಗದಗ ಜಿಲ್ಲೆಗೆ ಹೋಗಿ ಡ್ಯಾನ್ಸ್ ಮಾಡಿ ಬಂದಿದ್ದಾರೆ. ಆ ಜಿಲ್ಲೆಯಲ್ಲೂ ಬರ ಇದೆ, ಏನು ಪರಿಹಾರ ಕೊಟ್ಟು ಬಂದಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ. ಗ್ಯಾರಂಟಿ ಕಾರ್ಯಕ್ರಮಕ್ಕಾಗಿ ಕೇಂದ್ರದ ಯೋಜನೆ ನಿಲ್ಲಿಸಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ರೈತರು ಬೆಳೆದ ಭತ್ತ ಒಣಗಿ ಹೋಗಿದೆ. ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಸಂಪೂರ್ಣ ನಾಶವಾಗಿದೆ. ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂದಿದ್ದಾರೆ. ಯಾವುದು ಪೀಪಲ್ ಲೆಸ್ ಅಂತಾ ಮುಂದೆ ಎಲ್ಲವೂ ಗೊತ್ತಾಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

ಮುಂಗಾರು ‌ಕೊರತೆಯಿಂದ 60 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಜಿಲ್ಲಾ ಪ್ರವಾಸ ಮಾಡಿ ಸಿಎಂ, ಸಚಿವರು ಕೂಡ ವರದಿ ಕೊಟ್ಟಿದ್ದಾರೆ. ಬರಪರಿಹಾರ ಕೊಡಿಸಿ ಎಂದು ಬಿಜೆಪಿಯವರಿಗೆ ಸಿಎಂ ಹೇಳಿದ್ದಾರೆ. ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಪಡೆದು ಹೋಗಿದೆ. 17 ಸಾವಿರ ಕೋಟಿ ರೂ. ಬರ ಪರಿಹಾರ ಹಣಕ್ಕೆ ಮನವಿ ಮಾಡಿದ್ದಾರೆ. ಇವರು‌ ಕೇಳಿದಷ್ಟು ನೆರವು ರಾಜ್ಯದಲ್ಲಿ ‌ಯಾವತ್ತೂ‌ ಬಂದಿಲ್ಲ ಎಂದು ಹೇಳಿದ್ದಾರೆ.

ನಾನು ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ. ಇಷ್ಟು ದೊಡ್ಡ ಮೊತ್ತದ ನೆರವನ್ನ ಯಾವ ರಾಜ್ಯಗಳು ಕೇಳಿಲ್ಲ. ಪರಿಹಾರ ಕೇಳುವುದಕ್ಕೂ ಹಲವು ನಿಯಮಗಳಿವೆ. ಅದರ ಗಂಭೀರತೆ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಬೊಟ್ಟು ಮಾಡುತ್ತಿದೆ. ವಿದ್ಯುತ್ ವಿಚಾರ, ಅಕ್ಕಿ ವಿಚಾರದಲ್ಲೂ ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ ಎಂದು ಆರೋಪಿಸಿದರು.

ಪದೇ ಪದೇ ಕಾಂಗ್ರೆಸ್​ನವರು ಹೇಳುತ್ತಾರೆ ನಾವು ಗುಲಾಮರಲ್ಲ ಅಂತ. ನಾವೆಲ್ಲರು ಜನರ ಗುಲಾಮರು ಅನ್ನೋದನ್ನ ಮರೆಯಬಾರದು. ರಾಜ್ಯದಲ್ಲಿ ಕಷ್ಟದ ಪರಿಸ್ಥಿತಿ ಇರುವಾಗ, ಸಿಎಂ ಆದವರು ಹೇಗೆಲ್ಲ ಮಾತನಾಡುತ್ತಾರೆ ಅನ್ನೋದನ್ನು ನಾನು ನೋಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಾರಂಭದ‌ ಹಂತದಲ್ಲಿ ಸುಮಾರು 4 ಸಾವಿರ ಕೋಟಿ ರೂ. ಕೇಂದ್ರ ಕೊಡಬೇಕು‌ ಅಂತಾ ಮನವಿ ಮಾಡಿದ್ದರು. ಮೂವರು‌ ಮಂತ್ರಿಗಳು‌ ಕೇಂದ್ರ ಸಚಿವರನ್ನ ‌ಭೇಟಿಯಾಗಲು ಹೋಗಿದ್ದರು. ಕೇಂದ್ರ ಸಚಿವರು ಸಿಗದೇ ಕಾರ್ಯದರ್ಶಿಗಳನ್ನ ಭೇಟಿಯಾಗಿದ್ದೇವೆ ಅಂದಿದಾರೆ. ಕೇಂದ್ರ ಸಚಿವರು‌ ಸಿಗ್ತಿಲ್ಲ ಅಂತಾ‌ ಹೇಳಿದ್ದಾರೆ ಎಂದರು.