ಪ್ರಸಕ್ತ ಸಾಲಿನ ಅಖಿಲ ಭಾರತ ವಕೀಲರ ಪರೀಕ್ಷೆಯನ್ನು (ಎಐಬಿಇ XVIII) ಡಿಸೆಂಬರ್ 3ರ ಬದಲಿಗೆ ಡಿಸೆಂಬರ್ 10ರಂದು ನಡೆಸಲು ಭಾರತೀಯ ವಕೀಲರ ಪರಿಷತ್ (ಬಿಸಿಐ) ನಿರ್ಧರಿಸಿದ್ದು ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಪರೀಕ್ಷೆಯು ಡಿ.10 ರಂದು ನಡೆಯಲಿದ್ದು ಪರೀಕ್ಷೆಗೆ ನೋಂದಾಯಿಸುವ ಕೊನೆಯ ದಿನಾಂಕವನ್ನು ನವೆಂಬರ್ 16ರವರೆಗೆ ವಿಸ್ತರಿಸಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಯ ಸ್ನಾತಕೋತ್ತರ ಪ್ರವೇಶ ಪರೀಕ್ಷೆ (ಸಿಎಲ್‌ಎಟಿ- ಪಿಜಿ) ಮತ್ತು ಮಧ್ಯಪ್ರದೇಶ ನ್ಯಾಯಾಂಗ ಸೇವಾ ಪ್ರವೇಶಾತಿ ಪರೀಕ್ಷೆಗಳು ಇರುವುದರಿಂದ ಪರೀಕ್ಷಾ ದಿನವನ್ನು ಮುಂದೂಡಲಾಗಿದೆ ಎಂದು ಬಿಸಿಐ ವಿವರಿಸಿದೆ.
ಈ ಪರೀಕ್ಷೆ ನಡೆಯುವ ಸಂದರ್ಭದಲ್ಲೇ ಬೇರೆ ಪರೀಕ್ಷೆಗಳೂ ಇರುವುದರಿಂದ ಸಮಸ್ಯೆ ಉಂಟಾಗುತ್ತದೆ ಎಂದು ಅನೇಕ ಅಭ್ಯರ್ಥಿಗಳು ಬಿಸಿಐಗೆ ಪತ್ರ ಬರೆದಿದ್ದರು. “ಅಖಿಲ ಭಾರತ ವಕೀಲರ ಪರೀಕ್ಷೆ, ಸಿಎಲ್‌ಎಟಿ ಪಿಜಿ ಮತ್ತು ಮಧ್ಯಪ್ರದೇಶ ನ್ಯಾಯಾಂಗ ಸೇವಾ ಪ್ರವೇಶಾತಿ ಪರೀಕ್ಷೆಗಳ ಮಹತ್ವ ಗಮನಿಸಿ ಈ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಅಭ್ಯರ್ಥಿಗಳಿಗೆ ನ್ಯಾಯಯುತ ಅವಕಾಶವನ್ನು ಒದಗಿಸಲು ಬಿಸಿಐ ಬದ್ಧವಾಗಿದೆ” ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.
ಎಐಬಿಇ XVIII ಪರೀಕ್ಷೆ ಈ ಮೊದಲು ಅಕ್ಟೋಬರ್ 29ರಂದು ನಡೆಯಬೇಕಿತ್ತು. ಪರೀಕ್ಷಾ ದಿನವನ್ನು ಭಾರತೀಯ ವಕೀಲರ ಪರಿಷತ್ ಮುಂದೂಡಿರುವುದು ಇದು ನಾಲ್ಕನೇ ಬಾರಿಯಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.