ಮನೆ ಸುದ್ದಿ ಜಾಲ ಕನ್ನಡಿಗ ಬಗ್ಗವಳ್ಳಿ ಸೋಮಶೇಖರ್ ರಾಜು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ನೇಮಕ  

ಕನ್ನಡಿಗ ಬಗ್ಗವಳ್ಳಿ ಸೋಮಶೇಖರ್ ರಾಜು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ನೇಮಕ  

0

ಬೆಂಗಳೂರು(Bengaluru): ಲೆಫ್ಟಿನೆಂಟ್ ಜನರಲ್(Leftinent ಬಗ್ಗವಳ್ಳಿ ಸೋಮಶೇಖರ್ ರಾಜು ಅವರು ಮೇ 1 ರಂದು ಸೇನಾ ಸಿಬ್ಬಂದಿ ಮುಂದಿನ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.

ಲೆಫ್ಟಿನೆಂಟ್ ಜನರಲ್ ರಾಜು ಅವರು ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರ ಉತ್ತರಾಧಿಕಾರಿಯಾಗಲಿದ್ದಾರೆ. ಶನಿವಾರ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಅವರ ಅವಧಿಯನ್ನು ಪೂರ್ಣಗೊಳಿಸಿದ ನಂತರ 1.3 ಮಿಲಿಯನ್ ಸೈನ್ಯದ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಜನರಲ್ ರಾಜು ಅವರು ಪ್ರಸ್ತುತ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪೂರ್ವ ಲಡಾಖ್‌ನಲ್ಲಿ ಸೇನೆಯ ಒಟ್ಟಾರೆ ಕಾರ್ಯಾಚರಣೆ ಸಿದ್ಧತೆಯನ್ನು ನೋಡಿಕೊಳ್ಳುತ್ತಾರೆ. ಸೈನಿಕ್ ಸ್ಕೂಲ್ ಬಿಜಾಪುರ ಮತ್ತು ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ಶುಭಹಾರೈಸಿದ ಹೆಚ್.ಡಿ ಕುಮಾರಸ್ವಾಮಿ, ಪ್ರತಾಪ್ ಸಿಂಹ: ಕನ್ನಡಿಗರಾದ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ್​​ ರಾಜು ಅವರು ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕ ಆಗಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಕ್ಷಣ ಮತ್ತು ಸಂಭ್ರಮದ ಸಂದರ್ಭ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಕರ್ನಾಟಕದ ಪರಂಪರೆಯ ಇನ್ನೊಂದು ಗರಿ ಜನರಲ್‌ ಬಿ.ಎಸ್.ರಾಜು ಅವರು ಎಂದು ಶ್ಲಾಘಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದವರಾದ ಅವರು ಕಾಶ್ಮೀರದಲ್ಲಿ ನಡೆದ ʼಆಪರೇಷನ್‌ ಪರಾಕ್ರಮʼ ಸೇರಿ ಹಲವಾರು ಮಹತ್ವದ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡಿದ್ದರು. ಕನ್ನಡಾಂಬೆಯ ಹೆಮ್ಮೆಯ ಪುತ್ರ ಜನರಲ್‌ ರಾಜು ಅವರಿಗೆ ಶುಭವಾಗಲಿ, ಅವರ ಮುಂದಿನ ಎಲ್ಲ ಕಾರ್ಯಗಳಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

ಇನ್ನು ಸಂಸದ ಪ್ರತಾಪ್​​ ಸಿಂಹ ಟ್ವೀಟ್ ಮಾಡಿ, ಭಾರತೀಯ ಸೇನಾಪಡೆಯ ಉಪ ಮುಖ್ಯಸ್ಥರಾಗಿ ನೇಮಕವಾಗಿರುವ ಕನ್ನಡಿಗರಾದ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು ಅವರಿಗೆ ಅಭಿನಂದನೆಗಳು ಎಂದಿದ್ದಾರೆ.