ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್ ನಿಂದ ಇಂದು ಟಿಪ್ಪು ಜಯಂತಿ ಆಚರಣೆಗೆ ಸಿದ್ದತೆ ಹಿನ್ನೆಲೆ ಶ್ರೀರಂಗಪಟ್ಟಣ ಟೌನ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣದ ದಂಡಾಧಿಕಾರಿ ಪರುಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ರಕ್ಷಣೆ ದೃಷ್ಟಿಯಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಮೆರವಣಿಗೆ, ಪ್ರತಿಭಟನೆ, ರ್ಯಾಲಿ, ಬ್ಯಾನರ್, ಬಂಟಿಂಗ್ಸ್, ಪಟಾಕಿ ಸಿಡಿಸಿ ಗುಂಪು ಕಟ್ಟದಂತೆ ಸೂಚನೆ ನೀಡಲಾಗಿದೆ.
ಇಂದು ಶ್ರೀರಂಗಪಟ್ಟಣದ ಗುಂಬಜ್ ನಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ತಯಾರಿ ನಡೆಸಲಾಗಿದೆ.