ಮನೆ ಅಪರಾಧ ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಮೂವರು ಯುವಕರು ವಶಕ್ಕೆ

ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಮೂವರು ಯುವಕರು ವಶಕ್ಕೆ

0

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಗ್ಯಾಂಗ್ ರೇಪ್ ಸಂಭವಿಸಿದ್ದು, 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ ಎಸಗಿರುವ ಘಟನೆ ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನವೆಂಬರ್ 4 ರಂದು ಮೂವರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರು ಯುವ ದಸರಾ ವೇಳೆ ಸಂತ್ರಸ್ತ ಬಾಲಕಿಯನ್ನ ಆರೋಪಿ ಪರಿಚಯ ಮಾಡಿಕೊಂಡಿದ್ದು, ಪ್ರೀತಿಸುವುದಾಗಿ ನಂಬಿಕೆ ಹುಟ್ಟಿಸಿದ್ದಾನೆ. ಇದಾದ ಬಳಿಕ ಅಪ್ರಾಪ್ತ ಬಾಲಕಿಯನ್ನ ಮದ್ದೂರು ಲಾಡ್ಜ್ ಗೆ ಕರೆದೊಯ್ದು ಪರಿಚಿತ ಆರೋಪಿ ಸೇರಿ ಮೂವರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬಳಿಕ ವಿಡಿಯೋ ತೋರಿಸಿ ಕರೆದಾಗ ಬರುವಂತೆ ಸಂತ್ರಸ್ತ ಬಾಲಕಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು.

ಈ ಬಗ್ಗೆ ಸಂತ್ರಸ್ತೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಯುವಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮದ್ದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.