ಮನೆ ಸ್ಥಳೀಯ ಮೈಸೂರು: ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಪೇಪರ್ ಭಸ್ಮ

ಮೈಸೂರು: ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ಪೇಪರ್ ಭಸ್ಮ

0

ಮೈಸೂರು: ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್ ​ನಲ್ಲಿ ಸಂಭವಿಸಿದೆ.

ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ ಕಾರ್ಖಾನೆಯ ಬಳಿ ಪೇಪರ್ ಮಿಲ್ ಕಾರ್ಖಾನೆಯ ಗೋಡಾನ್​ ನಲ್ಲಿ ಶನಿವಾರ ಬೆಳಗಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ ನಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಗೊಡೌನ್ ​ನಲ್ಲಿ ಇದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಆಗಮಿಸಿದ ಸುಮಾರು 4 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಅಗ್ನಿಶಾಮಕ ಅಧಿಕಾರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಈ ಘಟನೆ ಕುರಿತು ನಂಜನಗೂಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.