ದೃಷ್ಟಿ ವಿಶೇಷ ಚೇತನರೂ ಸೇರಿದಂತೆ ದಿವ್ಯಾಂಗರಿಗೆ ನೆರವಾಗುವ ದೃಷ್ಟಿಯಿಂದ ಬಸ್ ಗಳಲ್ಲಿ ಆಡಿಯೊ ರೂಪದಲ್ಲಿ ಪ್ರಕಟಣಾ ವ್ಯವಸ್ಥೆ ಅಳವಡಿಸುವಂತೆ ಖಾಸಗಿ ಬಸ್ ಆಪರೇಟರ್ ಗಳಿಗೆ ನಿರ್ದೇಶನ ನೀಡುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಬೆಂಗಳೂರಿನ ದೃಷಿ ವಿಶೇಷ ಚೇತನ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
“ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಆಡಿಯೊ ವ್ಯವಸ್ಥೆ ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ. ಆದರೆ, ಕೆಲವು ಮಾರ್ಗಗಳಲ್ಲಿ ಖಾಸಗಿ ಬಸ್ ಗಳೂ ಕೂಡ ಸಂಚಾರ ಕೈಗೊಳ್ಳುತ್ತಿರುವುದರಿಂದ ಆ ಬಸ್ ಗಳಲ್ಲಿ ವಿಶೇಷ ಚೇತನರ ಪ್ರಯಾಣಕ್ಕೆ ಅಗತ್ಯ ನೆರವು ಕಲ್ಪಿಸಿಕೊಡಬೇಕಿದೆ” ಎಂದು ಆದೇಶಿಸಿದೆ.
“ರಾಜ್ಯ ಸರ್ಕಾರ ಈ ವಿಚಾರದಲ್ಲಿ ಸಕಾರಾತ್ಮಕ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ. ಸರ್ಕಾರ ಖಾಸಗಿ ಬಸ್ ಆಪರೇಟರ್ ಗಳಿಗೆ ಅಗತ್ಯ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಬೇಕು. ಆ ನಿರ್ದೇಶನ ಹಾಲಿ ಹಲವು ಮಾರ್ಗಗಳಲ್ಲಿ ಸಂಚರಿಸುತ್ತಿರುವ ಬಸ್ ಗಳಿಗೆ ಮಾತ್ರವಲ್ಲ, ಹೊಸದಾಗಿ ಪರ್ಮಿಟ್ ನೀಡುವ ಬಸ್ ಗಳಿಗೂ ಅನ್ವಯವಾಗುವಂತೆ ಇರಬೇಕು” ಎಂದು ನ್ಯಾಯಾಲಯ ತಾಕೀತು ಮಾಡಿದೆ.
“ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ಸರ್ಕಾರಕ್ಕೆ ವಿಶೇಷ ಚೇತನ ಸ್ನೇಹಿ ಪ್ರಯಾಣಿಕರಿಗೆ ಅನುಕೂಲವಾಗವಂತೆ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸುವಂತೆ ಮನವಿ ಸಲ್ಲಿಸಬೇಕು. ಇದನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಾಲಯ ಸೂಚನೆ ನೀಡಿದೆ.
“ಬಿಎಂಟಿಸಿ ಮತ್ತು ರಾಜ್ಯ ಸರ್ಕಾರ ಈ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಹೆಚ್ಚುವರಿ ಅಫಿಡವಿಟ್ ಸಲ್ಲಿಸಬೇಕು” ಎಂದು ನಿರ್ದೇಶನ ನೀಡಿರುವ ನ್ಯಾಯಾಲಯ ನಾಲ್ಕು ವಾರ ವಿಚಾರಣೆಯನ್ನು ಮುಂದೂಡಿದೆ.
ಅರ್ಜಿದಾರರು, ಆರಂಭದಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಮತ್ತು ಮೆಟ್ರೊ ರೈಲುಗಳಲ್ಲಿ ಆಡಿಯೊ ಪ್ರಕಟಣಾ ವ್ಯವಸ್ಥೆ ಇತ್ತು. ಇದರಿಂದ ದೃಷ್ಟಿ ವಿಶೇಷ ಚೇತನರಿಗೆ ಎಲ್ಲೆಲ್ಲಿ ಇಳಿಯಬೇಕು ಎಂಬುದಕ್ಕೆ ಅನುಕೂಲವಾಗುತ್ತದೆ. ಆದರೆ, ಆ ವ್ಯವಸ್ಥೆಯನ್ನು ಇದ್ದಕ್ಕಿದ್ದಂತೆ ಸ್ಥಗಿತಗೊಳಿಸಲಾಗಿದೆ. ಇದರಿಂದ ತೀವ್ರ ತೊಂದರೆ ಆಗುತ್ತದೆ” ಎಂದು ಹೇಳಿದ್ದಾರೆ.
“ಇಂಥ ಆಡಿಯೊ ವ್ಯವಸ್ಥೆ ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಸಾರಿಗೆ ಬಸ್ ಗಳಲ್ಲಿ ಚಾಲ್ತಿಯಲ್ಲಿದೆ. ಇತ್ತೀಚಿನ ದಿನಗಳಲ್ಲಿ ಓಲಾ ಮತ್ತು ಉಬರ್ ಟ್ಯಾಕ್ಸಿಗಳಲ್ಲೂ ಸಹ ಗೂಗಲ್ ಮ್ಯಾಪ್ ಸಹಾಯದಿಂದ ನೆರವು ಲಭ್ಯವಾಗುತ್ತಿದೆ. ಆಡಿಯೊ ವ್ಯವಸ್ಥೆ ಇಲ್ಲದಿದ್ದರೆ ದಿವ್ಯಾಂಗರಿಗೆ ಸಾರ್ವಜನಿಕ ಹಾಗೂ ಖಾಸಗಿ ಬಸ್ ಹಾಗೂ ಇತರೆ ಸಂಚಾರ ವ್ಯವಸ್ಥೆಗಳಲ್ಲಿ ತೊಂದರೆ ಆಗಲಿದೆ” ಎಂದು ಪೀಠಕ್ಕೆ ವಿವರಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.