ಮನೆ ರಾಜ್ಯ ಮೂಡಿಗೆರೆ: ನಿಯಂತ್ರಣ ತಪ್ಪಿ ಹೊಂಡಕ್ಕೆ ಪಲ್ಟಿಯಾದ ಕಾರು- ಪ್ರಯಾಣಿಕರು ಪಾರು

ಮೂಡಿಗೆರೆ: ನಿಯಂತ್ರಣ ತಪ್ಪಿ ಹೊಂಡಕ್ಕೆ ಪಲ್ಟಿಯಾದ ಕಾರು- ಪ್ರಯಾಣಿಕರು ಪಾರು

0

ಮೂಡಿಗೆರೆ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.

ಮೂಡಿಗೆರೆ ನ್ಯಾಯಾಧೀಶ ವಿಶ್ವನಾಥ್ ಅವರಿಗೆ ಸೇರಿದ ಕಾರಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.